ಚಿಕ್ಕಬಳ್ಳಾಪುರ: ಕರ್ನಾಟಕ ವಿಧಾನಸಭೆ ಚುನಾವಣೆ2023 ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಸೋಲಿನಿಂದ ಮನನೊಂದ ಅಂಧ ಅಭಿಮಾನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕಿನ ವಡ್ರೆಪಾಳ್ಯದಲ್ಲಿ ನಡೆದಿದೆ.
ಚಿತ್ತಾರ ವೆಂಕಟೇಶ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಚಿಕ್ಕಬಳ್ಳಾಪುರ ನಗರದ ಕೋಟೆ ನಿವಾಸಿ ವೆಂಕಟೇಶ್ ಸುಧಾಕರ್ ಅವರ ಕಟ್ಟಾ ಅಭಿಮಾನಿಯಾಗಿದ್ದ. ಇದೀಗ ಅವರ ಸೋಲಿನಿಂದ ಬೇಸರಗೊಂಡು ಕೆರೆಗೆ ದುಮುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರಿದ್ದ ಸುಧಾಕರ್ ವಿರುದ್ಧ ಕಾಂಗ್ರೆಸ್ ನ ಪ್ರದೀಪ್ ಈಶ್ವರ್ 10,642 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.
Saval TV on YouTube