ತುಮಕೂರು: ಸರ್ಕಾರದ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿಗಳ ಹೆಸರು ನಾಮಕರಣ ಮಾಡುವುದಾಗಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಸಿದ್ದಗಂಗಾ ಮಠದಲ್ಲಿ ನಡೆಯುತ್ತಿರುವ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರದ್ಧೆ,ನಿಷ್ಠೆ, ಪರಿಶ್ರಮ ಶಿವಕುಮಾರ ಶ್ರೀಗಳ ದ್ಯೇಯ. ಸವೋರ್ದಯ ಪರಿಕಲ್ಪನೆ ಮಠದಲ್ಲಿ ನಿತ್ಯ ನಿರಂತರವಾಗಿರುತ್ತದೆ. ಶ್ರೀಗಳ ಜಯಂತಿ ದಾಸೋಹ ದಿನವೆಂದು ಹಾಗೂ ಸರ್ಕಾರದ ಬಿಸಿಯೂಟ ಯೋಜನೆಗೆ ಶ್ರೀಗಳ ಹೆಸರಿಡುವುದಾಗಿ ವೇದಿಕೆಯಲ್ಲೇ ಘೋಷಣೆ ಮಾಡಿದರು.
ಸರ್ಕಾರದ ಬಿಸಿಯೂಟ ಯೋಜನೆಗೆ ಡಾ.ಶಿವಕುಮಾರ ಶ್ರೀಗಳ ಹೆಸರಿಡುವಂತೆ ರಾಜ್ಯಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಮನವಿ ಮಾಡಿದ್ದರು.