ಹಾಸನ: ಎಚ್ ಡಿ ರೇವಣ್ಣ ಅವರ ಪುತ್ರ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧವೂ ಸಹ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ.
ಜೆಡಿಎಸ್ ಕಾರ್ಯಕರ್ತನ ಮೇಲೆ ಸೂರಜ್ ರೇವಣ್ಣ, ತಮ್ಮ ಪಕ್ಷದ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಸೂರಜ್ ರೇವಣ್ಣ ಅವರು ಜೂನ್ 16ರ ರಾತ್ರಿ ತಮ್ಮ ಪಕ್ಷದ ಕಾರ್ಯಕರ್ತನನ್ನು ಸಹಾಯ ಮಾಡುವುದಾಗಿ ಚನ್ನಪಟ್ಟಣ ತಾಲ್ಲೂಕಿನ ಗನ್ನಿಕಡದ ತೋಟದ ಮನೆಗೆ ಕರೆಯಿಸಿಕೊಂಡು ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾಗಿದೆ. ಬಲವಂತವಾಗಿ ತನ್ನ ಮೇಲೆ ದೌರ್ಜನ್ಯ ನಡೆಸಿರುವ ಬಗ್ಗೆ ಜೆಡಿಎಸ್ ಕಾರ್ಯಕರ್ತ, ಸಿಎಂ, ಗೃಹ ಸಚಿವರು, ಡಿಜಿ ಮತ್ತು ಐಜಿಪಿ ಮತ್ತು ಹಾಸನ ಎಸ್ಪಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಸಿಕ್ಕ ಮಾಹಿತಿ ಪ್ರಕಾರ ಸಂತ್ರಸ್ತ ಯುವಕ ಸಿಎಂ, ಗೃಹ ಸಚಿವ ಹಾಗೂ ಡಿಜಿ ಮತ್ತು ಐಜಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.