ನವದೆಹಲಿ(New Delhi): ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಸೋಮವಾರ ಬೆಳಿಗ್ಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಬೆಳಿಗ್ಗೆ 10.15ಕ್ಕೆ ನಡೆದ ಕಾರ್ಯಕ್ರಮದಲ್ಲಿ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ಪ್ರಮಾಣವಚನ ಬೋಧಿಸಿದರು.
ಪ್ರಮಾಣವಚನಕ್ಕೆ ಮುನ್ನ, ನಿರ್ಗಮಿತ ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ನೂತನ ರಾಷ್ಟ್ರಪತಿ ಮುರ್ಮು ಅವರು ವಿಧಿಯುಕ್ತ ಮೆರವಣಿಗೆಯಲ್ಲಿ ಸಂಸತ್ತಿಗೆ ಆಗಮಿಸಿದರು.
ಇದನ್ನೂ ಓದಿ . . .ರಾಜ್ ಘಾಟ್ ಗೆ ತೆರಳಿ ಗಾಂಧೀಜಿ ಸಮಾಧಿಗೆ ನಮಿಸಿದ ದ್ರೌಪದಿ ಮುರ್ಮು