ಕೆ.ಆರ್.ನಗರ : ಸಾಲಿಗ್ರಾಮ ತಾಲೂಕಿನ ಗಡಿ ಗ್ರಾಮ ಬೆಟ್ಟಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರು ಕಲುಷಿತಗೊಂಡ ಪರಿಣಾಮ 12 ಮಂದಿ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದು, ಒರ್ವ ವ್ಯಕ್ತಿ ಮೃತ ಪಟ್ಟಿದ್ದಾರೆ ಎನ್ನಲಾಗಿದೆ.
ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡು ಮೃತಪಟ್ಟ ವ್ಯಕ್ತಿ ಗೋವಿಂದೇಗೌಡ (65) ಎಂಬ ದುರ್ದೈವಿಯಾಗಿದ್ದಾರೆ. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಸರಿಯಾದ ರೀತಿಯಲ್ಲಿ ಕುಡಿಯುವ ನೀರು ಒದಗಿಸಲು ಸ್ಥಳೀಯ ಗ್ರಾಮ ಪಂಚಾಯತಿ ಕಲುಷಿತ ನೀರನ್ನು ಸರಬರಾಜು ಮಾಡಿದ ಹಿನ್ನೆಲೆಯಲ್ಲಿ ಇಂದು ಕೆಲವರಿಗೆ ವಾಂತಿ ಭೇದಿ ಕಾಣಿಸಿದೆ.
ನಮ್ಮ ವೈದ್ಯರ ತಂಡ ಮತ್ತು ಆರೋಗ್ಯ ಸಿಬ್ಬಂದಿಗಳು ಮನೆ ಮನೆಗೆ ಭೇಟಿ ಕೊಟ್ಟು ಪರೀಕ್ಷೆ ಮಾಡಿದ್ಸೇವೆ, ಕುಡಿಯುವ ನೀರು ಕಲುಷಿತಗೊಂಡಿದೆ. 12 ಜನರಲ್ಲಿ ಇಬ್ಬರು ತೀವ್ರ ಸ್ವರೂಪದಲ್ಲಿ ಅಸ್ವಸ್ಥರಾಗಿದ್ದಾರೆ. ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- ಡಾ.ಡಿ.ನಟರಾಜು, ತಾಲೂಕು ಆರೋಗ್ಯಾಧಿಕಾರಿ. ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲೂಕು.
ತಕ್ಷಣವೇ ಗ್ರಾಮಸ್ಥರು ಕೆಲವರನ್ನು ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕರೆತರಲಾಗಿದೆ, ಅದರಲ್ಲಿ ಗೋವಿಂದೇಗೌಡ ಎಂಬವರು ತೀವ್ರ ಸ್ವರೂಪದಲ್ಲಿ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಕುಟುಂಬದವರು ಪಕ್ಕದ ಹಾಸನ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗೋವಿಂದೇಗೌಡ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸುದ್ದಿ ತಿಳಿದ ತಾಲೂಕು ಆಸ್ಪತ್ರೆಯ ವೈದ್ಯರು ತಂಡ ಬೆಟ್ಟಹಳ್ಳಿ ಗ್ರಾಮಕ್ಕೆ ಭೇಟಿ ಕೊಟ್ಟು ಗ್ರಾಮದ ಎಲ್ಲಾ ಜನರನ್ನು ಆರೋಗ್ಯ ಪರೀಕ್ಷೆಗೆ ಒಳಪಡಿಸಿ ಚಿಕಿತ್ಸೆ ಅಗತ್ಯವಿರುವವರನ್ನು ಆಂಬುಲೆನ್ಸ್ ಮೂಲಕ ಸಾಲಿಗ್ರಾಮ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಕಳುಹಿಸಲಾಗಿದೆ.
ಈ ಸಂಬಂಧಿಸಿದಂತೆ ತಾಲೂಕು ಆರೋಗ್ಯಾಧಿಕಾರಿಗಳ ತಂಡ ಬೆಟ್ಟಹಳ್ಳಿ ಗ್ರಾಮದಲ್ಲಿ ಸಮಗ್ರವಾಗಿ ತನಿಖೆ ನಡೆಸುತ್ತಿದೆ.