ಮನೆ ಅಪರಾಧ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: 8 ಮಂದಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: 8 ಮಂದಿಗೆ ಗಾಯ

0

ದಾಂಡೇಲಿ : ದಾಂಡೇಲಿ -ಅಂಬಿಕಾನಗರ ರಸ್ತೆಯಲ್ಲಿ ಬರುವ ಮೋಹಿನಿ ವ್ರತದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಶುಕ್ರವಾರ ನಡೆದಿದೆ.

Join Our Whatsapp Group

ಮದುವೆ ಕಾರ್ಯಕ್ರಮಕ್ಕಾಗಿ ಶಿರಸಿಯಿಂದ ದಾಂಡೇಲಿಗೆ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ದಾಂಡೇಲಿ ನಗರದ ಸಮೀಪದಲ್ಲಿರುವ ಮೋಹಿನಿ ವೃತ್ತದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ಕಾರಿನ ಮುಂಬಾಗದಲ್ಲಿದ್ದ ಶಿರಸಿಯ ಸಂಕಲ್ಪ್ ಮತ್ತು ಚಾಲಕನಿಗೆ ಗಂಭೀರ ಗಾಯವಾಗಿದೆ. ಕಾರಿನಲ್ಲಿದ್ದ ಚಾಲಕ ಸೇರಿ ಮೂವರು ಪುರುಷರು, ಮೂವರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಎಂಟು ಜನರಿಗೆ ಗಾಯವಾಗಿದೆ. ಕಾರಿನಲ್ಲಿದ್ದವರೆಲ್ಲಾ ಶಿರಸಿ ಮೂಲದವರಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ನಡೆದ ತಕ್ಷಣವೇ ಆ ರಸ್ತೆಯಲ್ಲಿ ಹೋಗುತ್ತಿದ್ದ ಪ್ರಯಾಣಿಕರು ಹಾಗೂ ಇನ್ನಿತರ ಸಾರ್ವಜನಿಕರು ವಾಹನದೊಳಗಿದ್ದವರನ್ನು ರಕ್ಷಣೆ ಮಾಡಿ ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಗಾಯಗೊಂಡವರಲ್ಲಿ ಗಂಭೀರ ಗಾಯಗೊಂಡಿರುವ ಸಂಕಲ್ಪ್ ಮತ್ತು ಪ್ರಶಾಂತ್ ಹಾಗೂ ಒಂದು ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡಕ್ಕೆ ರವಾನಿಸಲಾಗಿದೆ.

ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಹಿಂದಿನ ಲೇಖನಡಿ ಕೆ ಶಿವಕುಮಾರ್ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು: ಪ್ರಲ್ಹಾದ್ ಜೋಶಿ
ಮುಂದಿನ ಲೇಖನಹಿಂದೂ ನಂಬಿಕೆಯನ್ನು ತೊಡೆದುಹಾಕಲು ಕಾಂಗ್ರೆಸ್ ಷಡ್ಯಂತ್ರ ನಡೆಸುತ್ತಿದೆ: ಪ್ರಧಾನಿ ಮೋದಿ