ಮನೆ ಅಪರಾಧ ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದ ಕಾರು: ಓರ್ವ ಸಾವು, ಓರ್ವನ ರಕ್ಷಣೆ, ಇಬ್ಬರು...

ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದ ಕಾರು: ಓರ್ವ ಸಾವು, ಓರ್ವನ ರಕ್ಷಣೆ, ಇಬ್ಬರು ನಾಪತ್ತೆ

0

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಕಾರು ಬಿದ್ದು ಓರ್ವ ವ್ಯಕ್ತಿ ಸಾವಪ್ಪಿರುವಂತಹ  ಘಟನೆ ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ನಡೆದಿದೆ.

Join Our Whatsapp Group

ಒಟ್ಟು ನಾಲ್ವರು ಪ್ರಯಾಣಿಕರ ಪೈಕಿ ಕಾರು ಮಾಲೀಕ ಫಯಾಜ್ ಸಾವು, ನಯಾಜ್ ರಕ್ಷಣೆ ಮಾಡಲಾಗಿದ್ದು, ಅಸ್ಲಂಪಾಷಾ, ಪೀರ್​ಖಾನ್​ಗಾಗಿ ಶೋಧ ಕಾರ್ಯಾಚರಣೆ ನಡೆದಿದೆ.

ಕಾರಿನಲ್ಲಿದ್ದ ನಾಲ್ವರು ಮಂಡ್ಯದ ಹಾಲಹಳ್ಳಿ ಸ್ಲಂ ನಿವಾಸಿಗಳು. ಘಟನಾ ಸ್ಥಳಕ್ಕೆ ಮಂಡ್ಯ ಡಿಸಿ ಡಾ.ಕುಮಾರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಅಪಾರ ನೀರು ಇರುವ ಕಾರಣ ಕಾರ್ಯಾಚರಣೆಗೆ ಅಡ್ಡಿ

ಪಾಂಡವಪುರದಿಂದ ಮಂಡ್ಯಕ್ಕೆ ಬರುವ ವೇಳೆ ಅವಘಡ ಸಂಭವಿಸಿದೆ. ವಿಸಿ ನಾಲೆಗೆ ತಡೆಗೋಡೆ ಇಲ್ಲದ ಹಿನ್ನೆಲೆ ಕಾರು ಬಿದ್ದಿದೆ ಎನ್ನಲಾಗುತ್ತಿದೆ. ಸದ್ಯ ಶಿವಳ್ಳಿ ಠಾಣೆ ಪೊಲೀಸರಿಂದ ಕಾರ್ಯಾಚರಣೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದಿದ್ದು, ಅಪಾರ ಪ್ರಮಾಣದಲ್ಲಿ ನೀರು‌ ಹರಿಯುತ್ತಿದೆ. ನೀರಿನ ರಭಸಕ್ಕೆ ಕಾರು ಮುಳುಗಡೆಯಾಗಿದೆ. ಅಪಾರ ನೀರು ಇರುವ ಕಾರಣ ಕಾರ್ಯಾಚರಣೆಗೆ ಅಡ್ಡಿ ಉಂಟಾಗುತ್ತಿದೆ.

ಇನ್ನು ತಡೆಗೋಡೆ ಇಲ್ಲದ ಕಾರಣ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪದೇ ಪದೇ ವಿಸಿ ನಾಲೆಗೆ ಕಾರು, ಬಸ್ ಬೀಳ್ಳುತ್ತಿವೆ. ಹೀಗಿದ್ದರೂ ತಡೆಗೋಡೆ ಮಾತ್ರ ಹಾಕುತ್ತಿಲ್ಲ. ಜನರ ಪ್ರಾಣಕ್ಕೆ ಇವರ ಬಳಿ ಬೆಲೆ ಇಲ್ಲ ಎಂದು ಸರ್ಕಾರಕ್ಕೆ ಜನರು ಇಡಿ ಶಾಪ ಹಾಕುತ್ತಿದ್ದಾರೆ.

ತಡೆಗೋಡೆ ನಿರ್ಮಾಣಕ್ಕೆ ಸ್ಥಳೀಯರು ಪ್ರತಿಭಟನೆ

ಇನ್ನು ದುರಂತದ ಸ್ಥಳಕ್ಕೆ ಬಂದ ಕಾವೇರಿ ನೀರಾವರಿ ನಿಗಮದ ಅಧಿಕಾರಿ ಇಂಜಿನಿಯರ್ ಜಗದೀಶ್‌ಗೆ ಜನರು ತರಾಟೆ ತೆಗೆದುಕೊಂಡಿದ್ದಾರೆ. ನಿಮ್ಮಿಂದಲೇ ದುರಂತ, ಕಾರಣವೇ ನೀವು ಎಂದು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತವಾಗಿದೆ. ತಡೆಗೋಡೆ ನಿರ್ಮಿಸುವಂತೆ ಆಗ್ರಹಿಸಿ ರಸ್ತೆಯಲ್ಲಿಯೇ ಕೂತು ಸ್ಥಳೀಯರು ಪ್ರತಿಭಟನೆ ಮಾಡಿದ್ದಾರೆ.

ಮಂಡ್ಯ ಡಿಸಿ ಡಾ.ಕುಮಾರ ಪ್ರಕ್ರಿಯಿಸಿದ್ದು, ಈ ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಇನ್ನೋರ್ವ ಜೀವಂತವಾಗಿ ಸಿಕ್ಕಿದ್ದಾನೆ. ಇಬ್ಬರು ನಾಪ್ಪತ್ತೆಯಾಗಿದ್ದಾರೆ. ಅವರ ಹುಡುಕಾಟ ನಡೆಯುತ್ತಿದೆ. ವಿಸಿ ನಾಲೆಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ. ನೀರನ್ನು ನಿಲ್ಲಿಸಲು ಹೇಳಿದ್ದೇವೆ. 5 ಗಂಟೆಗೆ ನೀರು ಕಡಿಮೆಯಾಗುತ್ತದೆ. ಬಳಿಕ ಕಾರು, ನಾಪತ್ತೆಯಾಗಿರುವವರನ್ನು ಹುಡುಕುತ್ತೇವೆ ಎಂದು ತಿಳಿಸಿದ್ದಾರೆ.