ಶಿವಮೊಗ್ಗ: ಲಂಚಕ್ಕೆ ಬೇಡಿಕೆ ಆರೋಪದ ಮೇಲೆ ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಸಹಾಯಕ ಕೃಷಿ ಅಧಿಕಾರಿಗಳು ದೂರು ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿರುವ ಕೆ.ಎಸ್ ಈಶ್ವರಪ್ಪ, ಮುಖ್ಯಮಂತ್ರಿಗಳು ಕೃಷಿ ಸಚಿವರನ್ನು ಸಂಪುಟದಿಂದ ಕೈಬಿಡಬೇಕು. ಹಣ ಲೂಟಿ ಮಾಡಿರುವವರ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಸರ್ಕಾರ ಬಂದು ಮೂರು ತಿಂಗಳು ಆಗಿಲ್ಲ, ರೈತರಿಗೆ ತೊಂದರೆ ಕೊಡುತ್ತಿದ್ದಾರೆ. ರೈತರಿಗೆ ಬಿಎಸ್ ಯಡಿಯೂರಪ್ಪ ಅವರು ಕೊಟ್ಟ ಹಣ ವಾಪಸ್ ಪಡೆಯುತ್ತಿದ್ದಾರೆ. ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿಟ್ಟ ಬೇರೆ ಹಣ ಬಳಸುತ್ತಿದ್ದಾರೆ. ರೈತರ ದ್ರೋಹಿ ಯಾರಾದರೂ ಇದ್ದರೆ ಅದು ಸಿಎಂ ಸಿದ್ದರಾಮಯ್ಯ ಎಂದು ವಾಗ್ದಾಳಿ ನಡೆಸಿದರು.