ಮನೆ ರಾಜಕೀಯ ರಾಜ್ಯದಲ್ಲಿ ಬರ ಪರಿಸ್ಥಿತಿ: ಫೆಬ್ರವರಿಯಲ್ಲಿ ಹಂಪಿ ಉತ್ಸವ ನಡೆಸಲು ನಿರ್ಧಾರ

ರಾಜ್ಯದಲ್ಲಿ ಬರ ಪರಿಸ್ಥಿತಿ: ಫೆಬ್ರವರಿಯಲ್ಲಿ ಹಂಪಿ ಉತ್ಸವ ನಡೆಸಲು ನಿರ್ಧಾರ

0

ಬೆಂಗಳೂರು : ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಹಂಪಿ ಉತ್ಸವ ಮುಂದಿನ ವರ್ಷ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ವಿಧಾನ ಸೌಧ ದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

Join Our Whatsapp Group

ರಾಜ್ಯದಲ್ಲಿ ವಿಜಯನಗರ- ಬಳ್ಳಾರಿ ಸೇರಿದಂತೆ ಬಹುತೇಕ ಜಿಲ್ಲೆ ಗಳ ಹೆಚ್ಚಿನ ಸಂಖ್ಯೆಯ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಹೀಗಾಗಿ ಇಂತಹ ಸ್ಥಿತಿಯಲ್ಲಿ ಉತ್ಸವ ನಡೆಸುವುದು ಕಷ್ಟ. ಫೆಬ್ರವರಿ ವೇಳೆಗೆ ಪರಿಸ್ಥಿತಿ ನೋಡಿಕೊಂಡು ಉತ್ಸವ ಮಾಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತ ವಾಯಿತು.


ಈ ಮುಂಚೆ ನವೆಂಬರ್ ನಲ್ಲಿ ಉತ್ಸವ ನಡೆಸಲು ನಿರ್ಧಾರ ಮಾಡಲಾಗಿತ್ತು. ಆದರೆ ಬರ ಪರಿಸ್ಥಿತಿ ಯಿಂದಾಗಿ ಮುಖ್ಯಮಂತ್ರಿ ಅವರು ಫೆಬ್ರವರಿ ಯಲ್ಲಿ ನಡೆಸಿ ಎಂದು ಸಲಹೆ ನೀಡಿದ್ದು, ಫೆಬ್ರವರಿ ಯಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.


ಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಗಳಾದ ನಸೀರ್ ಅಹಮದ್, ಗೋವಿಂದರಾಜು, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಮಂಜುಳಾ, ಮುಖ್ಯಮಂತ್ರಿ ಅವರ ಜಂಟಿ ಕಾರ್ಯದರ್ಶಿ ಜಯರಾಮ್, ಜಿಲ್ಲಾಧಿಕಾರಿ ದಿವಾಕರ್ ಸಭೆಯಲ್ಲಿ ಉಪಸ್ಥಿತರಿದ್ದರು.

ಹಿಂದಿನ ಲೇಖನಐಸಿಸಿ ರ‍್ಯಾಂಕಿಂಗ್ ಪ್ರಕಟ: ಟಾಪ್-10 ನಲ್ಲಿ ಐವರು ಭಾರತೀಯರು
ಮುಂದಿನ ಲೇಖನಕಾರುಡಿಕ್ಕಿ ಹೊಡೆದು ಮಗ ಸಾವು; ತಾಯಿಗೆ ತೀವ್ರ ಪೆಟ್ಟು