ನವದೆಹಲಿ(New Delhi): ಇಂದು ದೇಶದ 15ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ದ್ರೌಪದಿ ಮುರ್ಮು ಅವರು ರಾಜ್ಘಾಟ್ಗೆ ತೆರಳಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.
ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಬೆಳಿಗ್ಗೆ 10.15ಕ್ಕೆ ನಡೆಯಲಿರುವ ಪ್ರಮಾಣವಚನ ಕಾರ್ಯಕ್ರಮಕ್ಕೆ ನಿರ್ಗಮಿತ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರೊಂದಿಗೆ ವಿಧಿಯುಕ್ತ ಮೆರವಣಿಗೆಯಲ್ಲಿ ಆಗಮಿಸಲಿದ್ದಾರೆ.
ಮುರ್ಮು ಅವರಿಗೆ, ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ನಂತರ ಮುರ್ಮು ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹಾಗೂ ಇತರರು ಸಭೆಯಲ್ಲಿ ಭಾಗವಹಿಸಲಿದ್ದಾರೆ.