ಅಸ್ಸಾಂ(Assam): ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಸುಮಾರು 15 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದ್ದು, ಇಬ್ಬರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಇಲ್ಲಿನ ದಿಲ್ಲಾಯ್ ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಉತ್ತರ ಪ್ರದೇಶ ನೋಂದಣಿ ಸಂಖ್ಯೆ ಹೊಂದಿದ್ದ ಹಾಗೂ ಮಣಿಪುರ ಕಡೆಯಿಂದ ಬೆಳಗ್ಗೆ 11.30ಕ್ಕೆ ಬಂದ ವಾಹನವನ್ನು ತಪಾಸಣೆ ನಡೆಸಿದ ವೇಳೆ ವಾಹನ ಹಿಂಬದಿಯಲ್ಲಿ ಅಡಗಿಸಿಟ್ಟಿದ್ದ ಸುಮಾರು 4 ಕೆ.ಜಿ.ಯಷ್ಟು ಮಾದಕ ವಸ್ತು ವಶಕ್ಕೆ ಪಡೆಯಲಾಗಿದೆ.
ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಇಬ್ಬರೂ ಮಣಿಪುರದವರು ಎಂದು ತಿಳಿಸಿದ್ದಾರೆ.
ವಶಕ್ಕೆ ಪಡೆಯಲಾದ ಮಾದಕ ವಸ್ತುವಿನ ಬೆಲೆ ₹ 15 ಕೋಟಿ ಎಂದು ಅಂದಾಜಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.