ಅಸ್ಸಾಂ (Assam): ಅಸ್ಸಾಂನ ಕಮ್ರೂಪ್ ಜಿಲ್ಲೆಯಲ್ಲಿ ಐದು ಕೆಜಿ ಅಫೀಮು ಸೇರಿದಂತೆ 10 ಕೋಟಿ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.
‘ಆನ್ ಟೆಲಿಕಾಂ ಡ್ಯೂಟಿ’ ಎಂಬ ಸ್ಟಿಕ್ಕರ್‌ನೊಂದಿಗೆ ಮಿನಿ ಟ್ರಕ್‌ನಲ್ಲಿ ಡ್ರಗ್ಸ್ ಸಾಗಿಸಲಾಗುತ್ತಿತ್ತು. ವಾಹನದ ಮ್ಯೂಸಿಕ್ ಸಿಸ್ಟಂ ಮತ್ತು ಸ್ಪೇರ್ ಟಾಯರ್‌ನಲ್ಲಿ ಡ್ರಗ್ಸ್ ಅನ್ನು ಬಚ್ಚಿಡಲಾಗಿತ್ತು ಎಂದು ರಾಯ್ ಹೇಳಿದ್ದಾರೆ.
ಶನಿವಾರ ರಾತ್ರಿ ದೊರೆತ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಕಮಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬೋರ್ಕಾದಲ್ಲಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಯಿತು. ವಾಹನದಲ್ಲಿದ್ದ ಚಾಲಕ ಮತ್ತು ಇತರರು ಪರಾರಿಯಾಗಿದ್ದಾರೆ. ಅವರನ್ನು ಸೆರೆಹಿಡಿಯಲು ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದೇವೆ ಎಂದು ಪೊಲೀಸ್ ವರಿಷ್ಠ ಹಿತೇಶ್ ಚಂದ್ರ ರಾಯ್ ಮಾಹಿತಿ ನೀಡಿದ್ದಾರೆ.