ಮನೆ ರಾಜ್ಯ ಗಣರಾಜ್ಯೋತ್ಸವ ಆಚರಣೆ ವೇಳೆ ಗಾಳಿಯಲ್ಲಿ ಹಾರಿಸಿದ ಗುಂಡು ತಗುಲಿ ಗ್ರಾಪಂ ಅಧ್ಯಕ್ಷೆಗೆ ಗಾಯ

ಗಣರಾಜ್ಯೋತ್ಸವ ಆಚರಣೆ ವೇಳೆ ಗಾಳಿಯಲ್ಲಿ ಹಾರಿಸಿದ ಗುಂಡು ತಗುಲಿ ಗ್ರಾಪಂ ಅಧ್ಯಕ್ಷೆಗೆ ಗಾಯ

0

ವಿಜಯಪುರ: ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ರಾಷ್ಟ್ರ ಧ್ವಜಾರೋಹಣದ ವೇಳೆ ವ್ಯಕ್ತಿಯೊಬ್ಬ ಗಾಳಿಯಲ್ಲಿ ಹಾರಿಸಿದ ಗುಂಡು, ವೇದಿಕೆಯಲ್ಲಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆಗೆ ತಗುಲಿ, ಗಾಯಗೊಂಡಿರುವ ಘಟನೆ ಇಂಡಿ ತಾಲೂಕಿನಲ್ಲಿ ಜರುಗಿದೆ.

ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದ ಸಂದರ್ಭದಲ್ಲಿ ಕನ್ನಡ ಪರ ಸಂಘಟನೆಯ ಯುವಕ ಮಲ್ಲು ಗಿನ್ನಿ ಎಂಬಾತ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ‌. ಗಾಳಿಯಲ್ಲಿ ಹಾರಿಸಿದ ಗುಂಡು ವೇದಿಕೆಯಲ್ಲಿದ್ದ ಗ್ರಾಮ ಪಂಚಾಯತಿ ಆಧ್ಯಕ್ಷೆಗೆ ತಾಗಿದ್ದು ಗಾಯಗೊಂಡಿದ್ದಾರೆ.

ಹಿರೇರೂಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸೋಮವ್ವ ತೊಡೆಗೆ ಗುಂಡು ತಾಗಿ, ಗಾಯಗೊಂಡಿದ್ದಾರೆ. ಕೂಡಲೇ ಸೋಮವ್ವ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ದಿ ತಿಳಿಯುತ್ತಲೇ ಇಂಡಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗುಂಡು ಹಾರಿಸಿದ ಪ್ರಕರಣದ ಕುರಿತು ವಿಚಾರಣೆ ನಡೆಸಿದ್ದಾರೆ.

ಹಿಂದಿನ ಲೇಖನ75ನೇ ಗಣರಾಜ್ಯೋತ್ಸವ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಥಾವರ್ ಚಂದ್ ಗೆಹ್ಲೋಟ್‌
ಮುಂದಿನ ಲೇಖನಜ್ಞಾನವಾಪಿ ಮಸೀದಿಯ ಸ್ಥಳದಲ್ಲಿ ದೇವಾಲಯವಿತ್ತು; ಹಿಂದೂ ದೇವರ ಕೆತ್ತನೆಗಳು ಕೆಳಗೆ ಮುಚ್ಚಲ್ಪಟ್ಟಿವೆ: ಎಎಸ್ ಐ ವರದಿ