ಮೈಸೂರು(Mysuru): ಶರನ್ನವರಾತ್ರಿಯ ಪ್ರಮುಖ ಆಕರ್ಷಣೆಯಾದ ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಿದರು.
ಯದು ವಂಶದ ಸಾಂಪ್ರದಾಯದಂತೆ ನವರಾತ್ರಿಯ ಮೊದಲ ದಿನವಾದ ಇಂದು ಅಂಬಾವಿಲಾಸ ಅರಮನೆಯ ದರ್ಬಾರ್ ಹಾಲ್ನಲ್ಲಿ ಇರುವ ರತ್ನಖಚಿತ ಸಿಂಹಾಸನಕ್ಕೆ ಯದುವೀರ್ ಒಡೆಯರ್ ಪೂಜೆ ಸಲ್ಲಿಸಿ, ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಿ ಖಾಸಗಿ ದರ್ಬಾರ್ ನಡೆಸಿದರು.
ಬೆಳಗ್ಗೆ ಶುಭ ಮುಹೂರ್ತದಲ್ಲಿ ಅರಮನೆಯಲ್ಲಿ ಹೋಮ ಹವನಗಳನ್ನು ನಡೆಸಿದ ಯದುವೀರ್ ನವರರಾತ್ರಿಯ ಕಂಕಣ ಧಾರಣೆ ಮಾಡಿ ನಂತರ ಅರಮನೆಯಲ್ಲಿ ಖಾಸಗಿ ದರ್ಬಾರ್ನ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿರು.
ಬಳಿಕ 12.15 ರಿಂದ 12.25 ವರೆಗಿನ ಶುಭ ಗಳಿಗೆಯಲ್ಲಿ ರತ್ನಖಚಿತ ಸಿಂಹಾಸನಾರೋಹಣ ಮಾಡಿ ಖಾಸಗಿ ದರ್ಬಾರ್ ನಡೆಸಿದರು. ನಂತರ 33 ದೇವಾಲಯಗಳಿಂದ ಬಂದ ಪ್ರಸಾದ ಹಾಗೂ ತೀರ್ಥ ಸೇವನೆ ಮಾಡಿದರು. ಬಳಿಕ ಅರಮನೆ ಆನೆಗಳು, ಕುದುರೆ, ಹಸು, ಒಂಟೆಗಳೊಂದಿಗೆ ಆಗಮಿಸಿ ಪೂಜೆ ಸಲ್ಲಿಸಿದರು.