ಮನೆ ಸ್ಥಳೀಯ ದಸರಾ: ನಂದಿಧ್ವಜ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ದಸರಾ: ನಂದಿಧ್ವಜ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

0

ಬೆಂಗಳೂರು: ಐತಿಹಾಸಿಕ ಮೈಸೂರು ದಸರಾದ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೆ ಮುನ್ನ ಮೈಸೂರು ಅರಮನೆ ಬಲರಾಮ ಗೇಟ್​ ಬಳಿ ಸಿಎಂ ಸಿದ್ದರಾಮಯ್ಯ ನಂದಿಧ್ವಜ ಪೂಜೆ ನೆರವೇರಿಸಿದರು.

ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್​, ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ, ಸಚಿವರಾದ ಕೆ.ಹೆಚ್​.ಮುನಿಯಪ್ಪ, ವೆಂಕಟೇಶ್​, ಶಿವರಾಜ್​ ತಂಗಡಗಿ, ಕೆ.ಎನ್​.ರಾಜಣ್ಣ, ಭೈರತಿ ಸುರೇಶ್​ ಹಾಗೂ ಸಂಸದ ಪ್ರತಾಪ್​ ಸಿಂಹ ಸಾಥ್ ನೀಡಿದರು.

ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ವರ್ಷ ಮಳೆಯಿಲ್ಲದೆ ರಾಜ್ಯದ ಜನತೆ ಕಂಗಾಲಾಗಿದ್ದಾರೆ. ಬರಗಾಲ ತಾಂಡವವಾಡುತ್ತಿದೆ. ರೈತರು ಬಹಳ ಸಂಕಷ್ಟದಲ್ಲಿದ್ದಾರೆ. ಇನ್ನಾದರೂ ತಾಯಿ ಚಾಮುಂಡಿ ದೇವಿಯ ಅನುಗ್ರಹದಿಂದ ಮಳೆಯಾಗಲಿ ಎಂದು ನಾನು ಇಂದು ವಿಜಯ ದಶಮಿಯ ಶುಭ ಸಂದರ್ಭದಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದರು.

ಇಂದು ಮಧ್ಯಾಹ್ನ 1.46ರಿಂದ 2.48ರ ಶುಭ ಮಕರ ಲಗ್ನದಲ್ಲಿ ನಂದಿಧ್ವಜ ಪೂಜೆ ನೆರವೇರಿದೆ. ನಂದಿಧ್ವಜಕ್ಕೆ ಪೂಜೆ ಸಲ್ಲಿಸಿ ನಂತರ ಬಂಜೂಸವಾರಿಗೆ ಚಾಲನೆ ನೀಡಲಾಗುತ್ತದೆ. ನಂತರ ನಂದಿಧ್ವಜ, ಸ್ತಬ್ದಚಿತ್ರ, ಕಲಾತಂಡಗಳು ಮೆರವಣಿಗೆಯಲ್ಲಿ ಸಾಗಲಿವೆ.ಮೈಸೂರು ಅರಮನೆಯಿಂದ ಹೊಡಲಿರುವ ಜಂಬೂ ಸವಾರಿ ಕೆ.ಆರ್.ಸರ್ಕಲ್ , ಆರ್ಯವೇದ ಸರ್ಕಲ್‌, ತಿಲಕ್ ನಗರ ಬಂಬೂ ಬಜಾರ್ ಮೂಲಕ ಬನ್ನಿ ಮಂಟಪ್ಪಕ್ಕೆ ತಲುಪಲಿದೆ. ಸುಮಾರು 4 ರಿಂದ 5 ಕಿ ಮೀ ಜಂಬೂ ಸವಾರಿ ನಡೆಯಲಿದೆ.

49 ಟ್ಯಾಬ್ಲೋಗಳು ಭಾಗಿ: ಈ‌ ಬಾರಿ ಜಂಬೂಸವಾರಿ ಮೆರವಣಿಗೆಯಲ್ಲಿ 49 ಟ್ಯಾಬ್ಲೋಗಳು ಭಾಗಿಯಾಗಲಿವೆ. ರಾಜ್ಯಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಕುರಿತ ಸ್ತಬ್ಧ ಚಿತ್ರಗಳು ಸಹ ಇರುತ್ತವೆ. ಈ ಬಾರಿ ದಸರಾ ಮೆರವಣಿಗೆಯಲ್ಲಿ ಗಂಡುಕಲೆ ಎಂತಲೇ ಖ್ಯಾತಿ ಪಡೆದಿರುವ ಆಕರ್ಷಕ ನಂದಿಧ್ವಜ ಕುಣಿತದಲ್ಲಿ ಇದೇ ಮೊದಲ ಬಾರಿಗೆ 108 ನಂದಿಧ್ವಜ ಕುಣಿತ ಮಾಡಲಿದೆ.