ಮನೆ ರಾಜ್ಯ ಮೈಸೂರು:  ಸೆ. 26ರಿಂದ ದಸರಾ ವಸ್ತು ಪ್ರದರ್ಶನ ಪ್ರಾರಂಭ

ಮೈಸೂರು:  ಸೆ. 26ರಿಂದ ದಸರಾ ವಸ್ತು ಪ್ರದರ್ಶನ ಪ್ರಾರಂಭ

0

ಮೈಸೂರು(Mysuru):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ. ಅಲ್ಲದೇ ದಸರೆಯಲ್ಲಿ ಪ್ರವಾಸಿಗರನ್ನು ಕೈ ಬೀಸಿ ಕರೆಯುವ ದಸರಾ ವಸ್ತುಪ್ರದರ್ಶನ ಈ ಬಾರಿ ಸೆ. 26 ರಿಂದ ಪ್ರಾರಂಭಗೊಳ್ಳಲಿದೆ.

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಮಾಹಿತಿ ನೀಡಿದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಮೂರ್ತಿ , ವಿಶೇಷ ಕಾರ್ಯಕ್ರಮಗಳೊಂದಿಗೆ 90 ದಿನಗಳ ಕಾಲ ವಸ್ತುಪ್ರದರ್ಶನ  ಆಯೋಜನೆ ಮಾಡಲಾಗಿದೆ. ಈ ಬಾರಿಯ ವಸ್ತುಪ್ರದರ್ಶನದಲ್ಲಿ ಪುನೀತ್ ರಾಜ್ ಕುಮಾರ್ ನೆನಪಿಗಾಗಿ 7 ಸ್ಯಾಂಡ್ ಮ್ಯೂಸಿಯಂ ಆಯೋಜನೆ ಮಾಡಲಾಗಿದೆ, ಯೋಗ 3ಡಿ ವಿಡಿಯೋ ಮ್ಯಾಪಿಂಗ್ ಇರಲಿದೆ ಎಂದರು.

6 ಮಂದಿ ಸ್ವಾತಂತ್ರ್ಯ ಹೋರಾಟಗಾರರ ಮರಳಾಕೃತಿ ನಿರ್ಮಿಸಲಾಗುತ್ತದೆ, ಆ 6 ಮಂದಿ ಸ್ವಾತಂತ್ರ್ಯ ಹೋರಾಟಗಾರರನ್ನು  ಇನ್ನು ಆಯ್ಕೆ ಮಾಡಿಲ್ಲ. ಇನ್ನು ಕಾವೇರಿ ಬಹುಮಾಧ್ಯಮ ಕಲಾ ಗ್ಯಾಲರಿ ಉದ್ಘಾಟನೆಯಾಗಲಿದೆ.

ಹಾಗೆಯೇ ಆವರಣದಲ್ಲಿ ವೆಜ್ ಅಂಡ್ ನಾನ್ ವೆಜ್ ಪ್ರತ್ಯೇಕ ಸ್ಟಾಲ್ ಇರಲಿದೆ.  ವಸ್ತುಪ್ರದರ್ಶನದ ಅವರಣವನ್ನು ಪ್ಲಾಸ್ಟಿಕ್ ಮುಕ್ತ ವಲಯ ಎಂದು ಘೋಷಣೆ ಹಿನ್ನೆಲೆ ಪ್ಲಾಸ್ಟಿಕ್ ಬಳಸುವಂತಿಲ್ಲ. ಪ್ಲಾಸ್ಟಿಕ್ ಬಳಕೆ ತಡೆಗಟ್ಟಲು  ಪ್ರಾಧಿಕಾರದ ವತಿಯಿಂದಲೇ  ಆರ್ ಓ ಪ್ಲಾಂಟ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಹಿಂದಿನ ಲೇಖನಉಚಿತ ಕೊಡುಗೆ: ಮಾಧ್ಯಮ ಚರ್ಚೆಯಲ್ಲಿ ನ್ಯಾಯಾಲಯದ ಬಗ್ಗೆ ಡಿಎಂಕೆ ಹೇಳಿಕೆಗೆ ಸುಪ್ರೀಂ ಕೋರ್ಟ್‌ ಅಸಮಾಧಾನ
ಮುಂದಿನ ಲೇಖನʼಪ್ರಚೋದನಾಕಾರಿ ಉಡುಪುʼ: ವಿವಾದಾತ್ಮಕ ಆದೇಶ ಹೊರಡಿಸಿದ್ದ ಕೇರಳ ನ್ಯಾಯಾಧೀಶರು ಕಾರ್ಮಿಕ ನ್ಯಾಯಾಲಯಕ್ಕೆ ವರ್ಗ