ಬೆಂಗಳೂರು(Bengaluru): ವಿಶ್ವವಿಖ್ಯಾತ ನಾಡಹಬ್ಬ ದಸರಾವನ್ನು ಈ ಬಾರಿ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ.
ಜಗದ್ವಿಖ್ಯಾತ ಮೈಸೂರು ಸದರಾ ಈ ಬಾರಿ ಸೆಪ್ಟೆಂಬರ್ 26 ರಂದು ಸೋಮವಾರದಿಂದ ಆರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ದಸರಾ ಉದ್ಘಾಟನೆಗೆ ಸಂಬಂಧಿಸಿದಂತೆ ಯಾರನ್ನು ಆಹ್ವಾನಿಸುವುದು ಎಂಬುದರ ಬಗ್ಗೆ ಸಭೆ ನಡೆದಿತ್ತು. ಆ ಸಭೆಯ ಬಳಿಕ ರಾಷ್ಟ್ರಪತಿ ಅವರಿಗೆ ಪತ್ರ ಬರೆಯಲಾಗಿತ್ತು. ನಮ್ಮ ಪತ್ರಕ್ಕೆ ಸಮ್ಮತಿಸಿ ಇಂದು ಪತ್ರ ಬಂದಿದೆ. ಹೀಗಾಗಿ ಈ ಬಾರಿ ರಾಷ್ಟ್ರದ ಪ್ರಥಮ ಪ್ರಜೆ ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಬೆಂಗಳೂರಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರಕಟಿಸಿದ್ದಾರೆ.