ಮನೆ ರಾಜ್ಯ ದಸರಾ: ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ದಸರಾ: ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

0

ಮೈಸೂರು(Mysuru): ವಿಶೇಷ ವಿಮಾನದಲ್ಲಿ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತದ ಪ್ರಥಮ ಪ್ರಜೆ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅತ್ಯಂತ ಆತ್ಮೀಯತೆಯಿಂದ ಸ್ವಾಗತಿಸಿದರು.

ವಿಶ್ವವಿಖ್ಯಾತವಾಗಿರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ನೆರವೇರಿಸಲು ರಾಷ್ಟ್ರಪತಿ ಅವರು ಮೈಸೂರಿಗೆ ಆಗಮಿಸಿದ್ದಾರೆ.

ಬೆಳಿಗ್ಗೆ 9.45ರಿಂದ 10.05ರೊಳಗೆ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ನಾಡಹಬ್ಬವನ್ನು ಉದ್ಘಾಟಿಸಲಿದ್ದಾರೆ.

ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ.

ಇದನ್ನೂ ಓದಿ . . . ನಾಡಹಬ್ಬ ದಸರಾ ಉದ್ಘಾಟನೆಗೆ ಕ್ಷಣಗಣನೆ: ಬಿಗಿ ಪೊಲೀಸ್ ಬಂದೋಬಸ್ತ್

ಹಿಂದಿನ ಲೇಖನನಾಡಹಬ್ಬ ದಸರಾ ಉದ್ಘಾಟನೆಗೆ ಕ್ಷಣಗಣನೆ: ಬಿಗಿ ಪೊಲೀಸ್ ಬಂದೋಬಸ್ತ್
ಮುಂದಿನ ಲೇಖನನಿಮಾನ್ಸ್’ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ