ಮನೆ ಅಪರಾಧ 3 ಕೋಟಿ ಮೌಲ್ಯದ ಇ-ಸಿಗರೇಟ್ ವಶ: ಆರೋಪಿ ಬಂಧನ

3 ಕೋಟಿ ಮೌಲ್ಯದ ಇ-ಸಿಗರೇಟ್ ವಶ: ಆರೋಪಿ ಬಂಧನ

0

ಬೆಂಗಳೂರು: ನಿಷೇಧಿತ ಸುಮಾರು ಮೂರು ಕೋಟಿ ರೂಪಾಯಿ ಮೌಲ್ಯದ ಇ-ಸಿಗರೇಟ್ ಅನ್ನು ಸಿಸಿಬಿ ನಾರ್ಕೋಟಿಕ್ಸ್ ವಿಭಾಗದ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಇ-ಸಿಗರೇಟ್ ​ಗಳನ್ನು ದುಬೈಯಿಂದ ಬೆಂಗಳೂರಿಗೆ ತರಿಸಲಾಗಿತ್ತು ಎಂಬುದು ತಿಳಿದುಬಂದಿದೆ. ಒಂದು ಸಿಗರೇಟ್​​ ಗೆ ಐದರಿಂದ ಆರು ಸಾವಿರ ರೂಪಾಯಿಗೆ ಮಾರಾಟ ಮಾಡಲಾಗುತ್ತಿತ್ತು.

ಇ-ಸಿಗರೇಟ್ ಅನ್ನು ಬ್ಲೂ ಡಾರ್ಟ್ ಕೊರಿಯರ್ ಮೂಲಕ ದುಬೈಯಿಂದ ದೆಹಲಿಗೆ ತೆರಿಸಿ ಅಲ್ಲಿಂದ ಬೆಂಗಳೂರಿಗೆ ತರಿಸಲಾಗಿತ್ತು. ಬೆಂಗಳೂರಿನ ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಇರಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೇರಳ ಮೂಲದ ಶೋಹೇಬ್ ಎಂದು ಗುರುತಿಸಲಾಗಿದೆ.

ಈತ ಬೆಂಗಳೂರಿನ ಹಲವಾರು ಸ್ಮೋಕಿ ಜೋಜ್ ಹಾಗೂ ರೀಟೆಲ್ ಮಾರಾಟ ಮಾಡುವವರಿಗೆ ಇ-ಸಿಗರೇಟ್​​ ಅನ್ನು ನೀಡುತ್ತಿದ್ದ. ಅನ್​ಲೈನ್ ಮೂಲಕ ಆರ್ಡರ್ ಮಾಡಿಸಿಕೊಂಡು ಪೋರ್ಟರ್ ಮತ್ತು ಡ್ನಜೋ ಮೂಲಕ ಪೂರೈಕೆ ಮಾಡುತ್ತಿದ್ದ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಿಸಿಬಿ ಪೊಲೀಸರು ಅರೋಪಿಯನ್ನು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.