ಬೆಂಗಳೂರು: ಬೆಂಗಳೂರಿನಲ್ಲಿ ಇಂದು(ಬುಧವಾರ) ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ನಗರದ ಹುಳಿಮಾವು, ಬಾಗ್ ಮನೆ ಟೆಕ್ ಪಾರ್ಕ್ ಸೇರಿದಂತೆ ಐದು ಕಡೆ ದಾಳಿ ಮಾಡಿದೆ.
ತೆರಿಗೆ ವಂಚನೆ ಆರೋಪದ ಮೇಲೆ ಹುಳಿಮಾವು ಸಮೀಪದ ಆಪಸ್ ಅಪಾರ್ಟ್ ಮೆಂಟ್ ನ 14ನೇ ಮಹಡಿಯಲ್ಲಿರುವ ಉದ್ಯಮಿ ಮನೆ ಮೇಲೆ ಐಟಿ ಅಧಿಕಾರಿಗಳು ಬೆಳಗ್ಗೆ 6 ಗಂಟೆಗೆ ದಾಳಿ ಮಾಡಿದ್ದು, ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.
ಎಲ್ಲಾ ದಾಖಲೆ ಪರಿಶೀಲನೆ ನಡೆಸಿದ ಬಳಿಕ ಖುದ್ದು ಐಟಿ ಅಧಿಕಾರಿಗಳು ಮಾಧ್ಯಮಗಳಿಗೆ ಪತ್ರಿಕಾ ಪ್ರಕರಣೆ ಮೂಲಕ ಮಾಹಿತಿ ನೀಡಲಿದ್ದಾರೆ.