Saval TV on YouTube
ಪೋರ್ಟ್ ಬ್ಲೇರ್: ಅಂಡಮಾನ್ ಮತ್ತು ನಿಕೋಬರ್ ದ್ವೀಪ ಸಮೂಹದ ರಾಜಧಾನಿ ಫೋರ್ಟ್ ಬ್ಲೇರ್‌ನಿಂದ ಸುಮಾರು 253 ಕಿ.ಮೀ. ದೂರದ ಆಗ್ನೇಯ ದಿಕ್ಕಿನಲ್ಲಿ ಭೂಕಂಪ ಸಂಭವಿಸಿದೆ.
ರಾಷ್ಟ್ರೀಯ ಭೂಕಂಪ ಕೇಂದ್ರ (ಎನ್‌ಸಿಎಸ್) ಈ ಕುರಿತು ಟ್ವೀಟ್ ಮೂಲಕ ಮಾಹಿತಿ ಒದಗಿಸಿದೆ.
ಬುಧವಾರ ಮಧ್ಯರಾತ್ರಿ 2.29ರ ವೇಳೆಗೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.3ರಷ್ಟಿತ್ತು. ಭೂಕಂಪದಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. 10 ಕಿ.ಮೀ. ಆಳದಲ್ಲಿ ಕಂಪನದ ಕೇಂದ್ರ ಬಿಂದುವನ್ನು ಗುರುತಿಸಲಾಗಿದೆ.