ಮನೆ ರಾಜ್ಯ ಕೊಡಗು ಜಿಲ್ಲೆಯ ಹಲವೆಡೆ ಮತ್ತೆ ಕಂಪಿಸಿದ ಭೂಮಿ: ಆತಂಕದಲ್ಲಿ ಜನರು

ಕೊಡಗು ಜಿಲ್ಲೆಯ ಹಲವೆಡೆ ಮತ್ತೆ ಕಂಪಿಸಿದ ಭೂಮಿ: ಆತಂಕದಲ್ಲಿ ಜನರು

0

ಮಡಿಕೇರಿ (Madikeri): ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಮತ್ತೆ ಭೂಮಿ ಕಂಪಿಸಿದೆ. ಜಿಲ್ಲೆಯಲ್ಲಿ ಭೂಮಿ ಕಂಪಿಸುತ್ತಿರುವುದು ವಾರದಲ್ಲಿ ಇದು ಮೂರನೇ ಬಾರಿಯಾಗಿದೆ.

ಇಂದು ಬೆಳಗಿನ ಜಾವ 7.45ರ ಸುಮಾರಿಗೆ ಜನರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಮನೆಯಲ್ಲಿದ್ದ ಪಾತ್ರೆಗಳು ಅಲುಗಾಡಿವೆ.‌

 ಮಡಿಕೇರಿ, ನಾಪೋಕ್ಲು, ಕುಕ್ಕುಂದ, ಕಾಡು, ಬಲ್ಲಮಾವಟ್ಟಿ, ದಬ್ಬಡ್ಕ, ಪೆರಾಜೆ, ಕರಿಕೆ, ಭಾಗಮಂಡಲ ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದೆ.

ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಪರಿಣತ ಅನನ್ಯ ವಾಸುದೇವ್, 5 ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದೆ. ಸಾಕಷ್ಟು ಕಡೆಗಳಿಂದ ಜನರು ಮಾಹಿತಿ ನೀಡಿದ್ದಾರೆ. ವಿಷಯವನ್ನು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಗಮನಕ್ಕೆ ತರಲಾಗಿದೆ‌. ರಿಕ್ಟರ್ ಮಾಪಕದಲ್ಲಿ ದಾಖಲಾಗಿರುವ ದತ್ತಾಂಶಗಳ ಪರಿಶೀಲನೆ ನಡೆದಿದೆ. ಆ ಬಳಿಕ ಕಂಪನದ ತೀವ್ರತೆ ಗೊತ್ತಾಗಲಿದೆ. ಸದ್ಯಕ್ಕೆ ಜನರು ಆತಂಕಪಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.