ಇಂಫಾಲ: ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಇಂದು (ಶುಕ್ರವಾರ) ಮುಂಜಾನೆ ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಜಾನೆ 4:42ಕ್ಕೆ ಭೂಕಂಪ ಸಂಭವಿಸಿದೆ. ಕಂಪನದ ಕೇಂದ್ರಬಿಂದುವು ಬಿಷ್ಣುಪುರ ಪ್ರದೇಶದಲ್ಲಿ ಕಂಡುಬಂದಿದೆ ಎಂದು ಇಲಾಖೆ ಹೇಳಿದೆ.














