ಸೋಂಕಿನ ವಿರುದ್ಧ ಹೋರಾಡಲು ನಮ್ಮ ರೋಗನಿರೋಧಕ ಶಕ್ತಿಯನ್ನು ವೃದ್ಧಿಸಿಕೊಳ್ಳಲು ಕೆಲವು ಸಿಟ್ರಸ್ ಹಣ್ಣುಗಳು ಕೂಡ ತುಂಬಾ ಪ್ರಯೋಜನಕಾರಿ ಆಗಿವೆ.
ಸಿಟ್ರಸ್ ಹಣ್ಣುಗಳಲ್ಲಿ ವಿಟಮಿನ್ ಸಿ ಹೆಚ್ಚಾಗಿದ್ದು, ರೋಗ ನಿರೋಧಕ ಶಕ್ತಿ ವೃದ್ಧಿಗೆ ಈ ಹಣ್ಣುಗಳ ಸೇವನೆ ನೈಸರ್ಗಿಕ ಮಾರ್ಗವಾಗಿದೆ.
ಹಾಗಿದ್ದರೆ, ವಿಟಮಿನ್ ಸಿ ಕೊರತೆಯನ್ನು ನೀಗಿಸಲು ಸಹಾಯಕವಾಗುವ ಆ ಎರಡು ಅತ್ಯುತ್ತಮ ಹಣ್ಣುಗಳು ಯಾವುವು ಎಂದು ನೋಡುವುದಾದರೆ…
ಬಹಳ ಸುಲಭವಾಗಿ ಕೈಗೆಟುಕುವ ಬೆಳೆಯಲ್ಲಿ ಲಭ್ಯವಿರುವ ಹಣ್ಣು ಎಂದರೆ ಕಿತ್ತಳೆ ಹಣ್ಣು. ಈ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್‌ಗಳು ನಮ್ಮ ಸಮೃದ್ಧವಾಗಿದೆ. ಈ ಹಣ್ಣನ್ನು ನಿಮ್ಮ ಡಯಟ್ನಲ್ಲಿ ಸೇರಿಸುವುದರಿಂದ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಸ್ವತಂತ್ರ ರಾಡಿಕಲ್‌ಗಳಿಂದ ನಮ್ಮನ್ನು ರಕ್ಷಿಸುತ್ತವೆ. ಈ ಹಣ್ಣನ್ನು ನೆರವಾಗಿಯೂ ಸೇವಿಸಬಹುದು. ಮಾತ್ರವಲ್ಲ, ಜ್ಯೂಸ್ ರೂಪದಲ್ಲೂ ಸೇವಿಸಬಹುದು.
ದುಬಾರಿ ಹಣ್ಣು ಎಂತಲೇ ಖ್ಯಾತಿ ಪಡೆದಿರುವ ಕಿವಿ ಹಣ್ಣಿನಲ್ಲೂ ವಿಟಮಿನ್ ಸಿ ಸಮೃದ್ಧವಾಗಿದೆ. ಸಂಶೋಧನೆಯ ಪ್ರಕಾರ, ಕಿವಿ ಹಣ್ಣಿನಲ್ಲಿ ಕಿತ್ತಳೆ ಹಣ್ಣಿಗಿಂತ ಹೆಚ್ಚಿನ ವಿಟಮಿನ್ ಸಿ ಕಂಡು ಬರುತ್ತದೆ. ಕಿವಿ ಹಣ್ಣಿನ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಮಾತ್ರವಲ್ಲದೆ, ಇದರಲ್ಲಿ ಹಲವು ಪೋಷಕಾಂಶಗಳು ಹೆಚ್ಚಾಗಿದ್ದು ನಿಯಮಿತವಾಗಿ ಇದನ್ನು ಸೇವಿಸುವುದರಿಂದ ಹಲವು ಕಾಯಿಲೆಗಳಿಂದ ದೂರ ಉಳಿಯಬಹುದು ಎಂದು ಹೇಳಲಾಗುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.