ಎಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 22 ಟೆಕ್ನಿಕಲ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಡಿಸೆಂಬರ್ 14ರಂದು ಸಂದರ್ಶನ ನಡೆಯಲಿದ್ದು, ಅಭ್ಯರ್ಥಿಗಳು ಪಾಲ್ಗೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಹುದ್ದೆಯ ಮಾಹಿತಿ:
ಮುಂಬೈ-7
ನಲಿಯಾ-1
ಬೆಂಗಳೂರು-1
ಕೈಗಾ-5
ರಾವತ್ಭಟ, ಕೋಟಾ-1
ಅಲಹಾಬಾದ್-1
ಅಂಡಮಾನ್ & ನಿಕೋಬಾರ್-2
ವಿಜಾಗ್-1
ಯಾದಗಿರಿ-3
ವಿದ್ಯಾರ್ಹತೆ:
ಎಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ECE/EEE/E&I/CSE/ETC/ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಎಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 30, 2022ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
ಎಸ್ಸಿ/ಎಸ್ಟಿ ಅಭ್ಯರ್ಥಿಗಳು- 5 ವರ್ಷ
PWD ಅಭ್ಯರ್ಥಿಗಳು- 10 ವರ್ಷ
ಆಯ್ಕೆ ಪ್ರಕ್ರಿಯೆ:
ಕ್ವಾಲಿಫಿಕೇಶನ್
ಅನುಭವ
ಸಂದರ್ಶನ
ಸಂದರ್ಶನ ನಡೆಯುವ ಸ್ಥಳ:
ಫ್ಯಾಕ್ಟರಿ ಮೇನ್ ಗೇಟ್
ಎಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್
ECIL ಪೋಸ್ಟ್
ಹೈದರಾಬಾದ್-500062
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 07/12/2022
ಸಂದರ್ಶನ ನಡೆಯುವ ದಿನಾಂಕ: 14/12/2022














