ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 200 ಟೆಕ್ನಿಕಲ್ ಆಫೀಸರ್ ಹುದ್ದೆಗಳು ಖಾಲಿ ಇವೆ. ಇದೇ ಜನವರಿ 11, 2023ರಂದು ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಇಂಟರ್ ವ್ಯೂಗೆ ಹಾಜರಾಗಿ.
ಕೇಂದ್ರ ಸರ್ಕಾರದ ಹುದ್ದೆ ಹುಡುಕುತ್ತಿರುವ ಉದ್ಯೋಗಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ecil.co.in ಗೆ ಭೇಟಿ ನೀಡಬಹುದು.
ವೇತನ:
ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 25,000-31,000 ರೂ. ಸಂಬಳ ಕೊಡಲಾಗುತ್ತದೆ.
ವಯೋಮಿತಿ:
ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಡಿ.31, 2023ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು – 3 ವರ್ಷ
SC/ST ಅಭ್ಯರ್ಥಿಗಳು -5 ವರ್ಷ
PWD ಅಭ್ಯರ್ಥಿಗಳು- 10 ವರ್ಷ
ವಿದ್ಯಾರ್ಹತೆ:
ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ CSE/IT/ECE/EEE/ಮೆಕ್ಯಾನಿಕಲ್/ ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.
ಆಯ್ಕೆ ಪ್ರಕ್ರಿಯೆ:
ಶೈಕ್ಷಣಿಕ ಅರ್ಹತೆ
ಅನುಭವ
ಸಂದರ್ಶನ
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 05/01/2023
ಸಂದರ್ಶನ ನಡೆಯುವ ದಿನಾಂಕ: ಜನವರಿ 11, 2023
ಸಂದರ್ಶನ ನಡೆಯುವ ಸ್ಥಳ:
CED ಕಟ್ಟಡ
ಮುಖ್ಯ ಕಾರ್ಖಾನೆ
ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್
ECIL ಪೋಸ್ಟ್
ಹೈದರಾಬಾದ್ – 500062