ಮನೆ ರಾಷ್ಟ್ರೀಯ ರಾಹುಲ್‌ ಗಾಂಧಿ ವಿಚಾರಣೆ ಮುಂದಿನ ವಾರಕ್ಕೆ ಮುಂದೂಡಿದ ಇಡಿ

ರಾಹುಲ್‌ ಗಾಂಧಿ ವಿಚಾರಣೆ ಮುಂದಿನ ವಾರಕ್ಕೆ ಮುಂದೂಡಿದ ಇಡಿ

0

ನವದೆಹಲಿ (New Delhi): ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ವಿಚಾರಣೆಯನ್ನು ಜಾರಿ ನಿರ್ದೇಶನಾಲಯದ ಮುಂದಿನ ವಾರಕ್ಕೆ ಮುಂದೂಡಿದೆ.

ತಮ್ಮ ತಾಯಿ ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿರುವ ಕಾರಣ ಜೂನ್ 17ರಿಂದ ಜೂನ್ 20ರವರೆಗೆ ತಮ್ಮ ವಿಚಾರಣೆಯನ್ನು ಮುಂದೂಡುವಂತೆ ಜಾರಿ ನಿರ್ದೇಶನಾಲಯಕ್ಕೆ ರಾಹುಲ್ ಗಾಂಧಿ ಮನವಿ ಮಾಡಿದ್ದರು. ಅದರಂತೆ ಇಡಿ ವಿಚಾರಣೆಯನ್ನು ಮುಂದೂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು (ಜೂನ್‌ 17) ನಿಗದಿಯಾಗಿದ್ದ ವಿಚಾರಣೆಯಿಂದ ವಿನಾಯಿತಿ ನೀಡುವಂತೆ ಇಡಿ ತನಿಖಾಧಿಕಾರಿಗೆ ಪತ್ರ ಬರೆದಿದ್ದರು. ಕೋವಿಡ್-19 ಸಂಬಂಧಿತ ಸಮಸ್ಯೆಗಳಿಂದಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಹುಲ್ ಗಾಂಧಿ ಕಳೆದ ಮೂರು ದಿನಗಳಲ್ಲಿ ಇಡಿ ತನಿಖಾಧಿಕಾರಿಗಳ ಮುಂದೆ ಸುಮಾರು 30 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದರು. ರಾಹುಲ್ ಗಾಂಧಿ ಹೇಳಿಕೆಯನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ದಾಖಲಿಸಲಾಗಿದೆ.

ರಾಹುಲ್ ಗಾಂಧಿ ವಿರುದ್ಧದ ಇಡಿ ವಿಚಾರಣೆಯನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸುತ್ತಿದೆ. ಇದೊಂದು ದ್ವೇಷದ ರಾಜಕೀಯ ಎಂದು ಆರೋಪಿಸಿದೆ.

ಹಿಂದಿನ ಲೇಖನʻಅಗ್ನಿಪಥ್‌ʼ ಯೋಜನೆಯ ವಯೋಮಿತಿ 23 ವರ್ಷಕ್ಕೆ ಏರಿಕೆ
ಮುಂದಿನ ಲೇಖನರಾಜ್ಯ ಸರ್ಕಾರದ 21 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ