ಮನೆ ಕಾನೂನು ಯೂಟ್ಯೂಬರ್‌ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದ ಇ.ಡಿ

ಯೂಟ್ಯೂಬರ್‌ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದ ಇ.ಡಿ

0

ಮುಂಬಯಿ: ರೇವ್‌ ಪಾರ್ಟಿಯಲ್ಲಿ ಹಾವಿನ ವಿಷ ಬಳಸಿದ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ(ಇ.ಡಿ) ಬಿಗ್‌ ಬಾಸ್‌ ಓಟಿಟಿ-2 ವಿಜೇತ, ಯೂಟ್ಯೂಬರ್‌ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿದೆ.

Join Our Whatsapp Group

ಇತ್ತೀಚೆಗೆ ರೇವ್‌ ಪಾರ್ಟಿಯಲ್ಲಿ ಹಾವಿನ ವಿಷ ಬಳಸಿದ ಪ್ರಕರಣದಲ್ಲಿ ಉತ್ತರ ಪ್ರದೇಶದ ನೋಯ್ಡಾ ಪೊಲೀಸರು ಎಲ್ವಿಶ್‌ ಯಾದವ್‌ ರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಇದಾದ ಬಳಿಕ ಈ ಪ್ರಕರಣದಲ್ಲಿ ಆರೋಪಿಗಳ ವಿರುದ್ದ ಪೊಲೀಸರು 1200 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದರು.

ಇದೀಗ ರೇವ್‌ ಪಾರ್ಟಿ ಆಯೋಜಿಸಲು ಎಲ್ವಿಶ್‌ ಯಾದವ್‌ ಹಾಗೂ ಇತರರು ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದರೆಂದು ಅಕ್ರಮ ಹಣ ವರ್ಗಾವಣೆ (PMLA) ಕಾಯ್ದೆಯ ಅಡಿಯಲ್ಲಿ ಆರೋಪಗಳನ್ನು ಮಾಡಿ ದೂರು ದಾಖಲಿಸಲಾಗಿದೆ.

ಈ ಪ್ರಕರಣದಲ್ಲಿ ಎಲ್ವಿಶ್ ಯಾದವ್ ಮತ್ತು ಇತರೆ ಕೆಲವರನ್ನು ತನಿಖೆಯ ಭಾಗವಾಗಿ ವಿಚಾರಣೆ ನಡೆಸಲಾಗುವುದು ಎಂದು ವರದಿ ತಿಳಿಸಿದೆ.

ವಿಚಾರಣೆಗೆ ಬರುವಂತೆ ಎಲ್ವಿಶ್‌ ಯಾದವ್‌ ಗೆ ಇ.ಡಿ ಸಮನ್ಸ್‌ ನೀಡುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.

ಹಿಂದಿನ ಲೇಖನಸಿದ್ದನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ ಕಾರಿಗೆ ಟಿಪ್ಪರ್ ವಾಹನ ಡಿಕ್ಕಿ: ಸ್ವಾಮೀಜಿಗೆ ಗಂಭೀರ ಗಾಯ
ಮುಂದಿನ ಲೇಖನಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕಕ್ರಿಯೆ ಅತ್ಯಾಚಾರವಲ್ಲ, ಇದಕ್ಕೆ ಆಕೆ ಒಪ್ಪಿಗೆ ಅಗತ್ಯವಿಲ್ಲ : ಮಧ್ಯಪ್ರದೇಶ ಹೈಕೋರ್ಟ್