ಮನೆ ರಾಜ್ಯ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಪ್ರಕರಣ – ಬಿ ರಿಪೋರ್ಟ್‌ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಇಡಿ...

ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಪ್ರಕರಣ – ಬಿ ರಿಪೋರ್ಟ್‌ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಇಡಿ ಅರ್ಜಿ

0

ಬೆಂಗಳೂರು/ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್‌ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಜಾರಿ ನಿರ್ದೇಶನಾಲಯ ಅರ್ಜಿ ಸಲ್ಲಿಸಿದೆ.

ನಮ್ಮ ತನಿಖೆಯಲ್ಲಿ ಸಾಕಷ್ಟು ಮಾಹಿತಿ ಬಹಿರಂಗ ಆಗಿದೆ ಎಂದು ಕೆಳಹಂತದ ನ್ಯಾಯಾಲಯ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಇ.ಡಿ ಅಧಿಕಾರಿಗಳು ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಮುಡಾದಲ್ಲಿ ಹಗರಣ ನಡೆದಿದೆ. ನಾಲ್ವರು ಆರೋಪಿಗಳ ಪಾತ್ರ ಇರೋದು ತನಿಖೆಯಲ್ಲಿ ಸಾಕ್ಷ್ಯಾಧಾರ ಇದೆ. ಹೀಗಾಗಿ, ಮರು ತನಿಖೆಗೆ ಮನವಿ ಮಾಡಲಾಗಿದೆ. ಸ್ನೇಹಮಯಿ ಕೃಷ್ಣ ಬಳಿಕ ಇ.ಡಿಯಿಂದಲೂ ಪ್ರತ್ಯೇಕವಾಗಿ ಅರ್ಜಿ ಸಲ್ಲಿಕೆಯಾಗಿದೆ.