ಮನೆ ರಾಜ್ಯ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಇಡಿ ನೋಟಿಸ್ : ಮೈಸೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ – ಮುಖಂಡರು...

ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಇಡಿ ನೋಟಿಸ್ : ಮೈಸೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ – ಮುಖಂಡರು ವಶಕ್ಕೆ

0

ಮೈಸೂರು(Mysuru): ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿರುವುದನ್ನು ಹಾಗೂ ರಾಹುಲ್ ಗಾಂಧಿ ವಿಚಾರಣೆ ವಿರೋಧಿಸಿ ನಗರದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಡಿಸಿ ಕಚೇರಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್, ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ, ಶಾಸಕರಾದ ಯತೀಂದ್ರ ಸಿದ‍್ಧರಾಮಯ್ಯ, ತನ್ವೀರ್ ಸೇಠ್ ಸೇರಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.

ಈ ವೇಳೆ  ಕಾಂಗ್ರೆಸ್ ನಾಯಕರನ್ನ ಪೊಲೀಸರು ಮಾರ್ಗಮಧ್ಯೆ ತಡೆದಿದ್ದು, ಪ್ರತಿಭಟನಾಕಾರರು ರಸ್ತೆ ಮಧ್ಯೆ ಕುಳಿತು ಧರಣಿ ನಡೆಸಲು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಾನಿರತ ಕಾಂಗ್ರೆಸ್ ನಾಯಕರನ್ನ ವಶಕ್ಕೆ ಪಡೆದರು.

ಹಿಂದಿನ ಲೇಖನಬಿ.ಎಸ್.ಯಡಿಯೂರಪ್ಪ ವಿರುದ್ಧ ಅಕ್ರಮ ಡಿ-ನೋಟಿಫೈ ಪ್ರಕರಣ: ಜಾಮೀನು ಅರ್ಜಿ ಸಲ್ಲಿಕೆ
ಮುಂದಿನ ಲೇಖನನಕಲಿ ಗಾಂಧಿಗಳು ಕಾನೂನಿಗಿಂತ ದೊಡ್ಡವರೇ?: ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಕಿಡಿ