ಮುಂಬೈ: ಮುಂಬೈ. ಅಕ್ರಮ ಹಣ ವರ್ಗಾವಣೆ ಪ್ರಕರಣ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಅವರ ಮನೆ, ಕಚೇರಿಗಳ ಮೇಲೆ ಶುಕ್ರವಾರ(ನ.29) ಬೆಳಿಗ್ಗೆ ಅಧಿಕಾರಿಗಳು ದಾಳಿ ನಡೆಸಿದ್ದು ಅಗತ್ಯ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ದಾಳಿ ನಡೆಸಿದ ತಂಡ ಮಹಾರಾಷ್ಟ್ರ ಸೇರಿದಂತೆ ಉತ್ತರ ಪ್ರದೇಶದ ಸೇರಿದಂತೆ ಹದಿನೈದು ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ ಎನ್ನಲಾಗಿದೆ.
ಅಶ್ಲೀಲ ಸಿನಿಮಾ ನಿರ್ಮಾಣ ಮತ್ತು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ 2021 ರಲ್ಲಿ ಮುಂಬೈ ಪೊಲೀಸರು ರಾಜ್ ಕುಂದ್ರಾ ಅವರನ್ನು ಬಂಧಿಸಿದ್ದರು, ಇದಾದ ಮೂರೂ ತಿಂಗಳ ಬಳಿಕ ಜಾಮೀನು ಸಿಕ್ಕಿತ್ತು, ಇಷ್ಟು ಮಾತ್ರವಲ್ಲದೆ ಬಿಟ್ಕಾಯ್ನ್ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ಏಪ್ರಿಲ್ ನಲ್ಲಿ ಇಡಿ ಅಧಿಕಾರಿಗಳು ರಾಜ್ ಕುಂದ್ರಾ ಕಚೇರಿ, ಮನೆ ಸೇರಿದಂತೆ ಹಲವೆಡೆ ದಾಳಿ ನಡೆಸಿ ಸುಮಾರು 97.7 ಕೋಟಿ ರೂಪಾಯಿ ಆಸ್ತಿಯನ್ನು ಮುಟ್ಟುಗೋಲು ಹಾಕಿದ್ದರು ಅದರ ಬೆನ್ನಲ್ಲೇ ಇಂದು ಬೆಳಿಗ್ಗೆ ದಾಳಿ ನಡೆಸುವ ಮೂಲಕ ಮತ್ತೆ ಶಾಕ್ ನೀಡಿದ್ದಾರೆ.