ಚಿತ್ರದುರ್ಗ : ಕಾಂಗ್ರೆಸ್ ಶಾಸಕ ಕೆ.ಸಿ ವಿರೇಂದ್ರ ಪಪ್ಪಿ ಅವರ ಮನೆ ಮೇಲೆ ಇಡಿ ದಾಳಿ ನಡೆದಿದ್ದು, ಚಳ್ಳಕೆರೆ ಪಟ್ಟಣದಲ್ಲಿರುವ ನಾಲ್ಕು ಮನೆಗಳು ಹಾಗೂ ಬೆಂಗಳೂರಿನ ಸಹಕಾರನಗರದಲ್ಲಿರುವ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಲ್ಲದೇ ವಿರೇಂದ್ರ ಪಪ್ಪಿಯ ಸಹೋದರರಾದ ಕೆ.ಸಿ ನಾಗರಾಜ, ಕೆ.ಸಿ ತಿಪ್ಪೇಸ್ವಾಮಿ ಅವರ ಮನೆಗಳ ಮೇಲೂ ದಾಳಿಯಾಗಿದೆ. ದಾಳಿ ನಡೆಸಿ ಶಾಕ್ ಕೊಟ್ಟಿರುವ ಅಧಿಕಾರಿಗಳು ಮಹತ್ವದ ದಾಖಲೆಗನ್ನು ಪರಿಶೀಲಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.















