ಮನೆ ಅಪರಾಧ ಬೆಂಗಳೂರಿನಲ್ಲಿ ರೇಜರ್ ಪೇ, ಪೇಟಿಂ, ಕ್ಯಾಶ್ ಫ್ರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಡಿ ದಾಳಿ

ಬೆಂಗಳೂರಿನಲ್ಲಿ ರೇಜರ್ ಪೇ, ಪೇಟಿಂ, ಕ್ಯಾಶ್ ಫ್ರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಡಿ ದಾಳಿ

0

ಬೆಂಗಳೂರು(Bengaluru): ನಗರದಲ್ಲಿರುವ ರೇಜರ್ ಪೇ, ಪೇಟಿಎಂ, ಕ್ಯಾಶ್‌ಫ್ರೀಗೆ ಸಂಬಂಧಿಸಿದ 6 ಸ್ಥಳಗಳ ಮೇಲೆ ಜಾರಿ ನಿರ್ದೆಶನಾಲಯ(ಇ.ಡಿ) ದಾಳಿ ನಡೆಸಿದೆ.

ಚೀನಾದ ವ್ಯಕ್ತಿಗಳು ನಿಯಂತ್ರಿಸುತ್ತಿರುವ ಕಾನೂನು ಬಾಹಿರ ತ್ವರಿತ ಸ್ಮಾರ್ಟ್‌ಫೋನ್ ಆಧಾರಿತ ಸಾಲಗಳ ವ್ಯವಹಾರಕ್ಕೆ ಸಂಬಂಧಿಸಿದಂತೆ ಈ ಶೋಧ ನಡೆಸಲಾಗುತ್ತಿದ್ದು, ಶುಕ್ರವಾರದಿಂದ ಶೋಧ ಕಾರ್ಯ ಆರಂಭವಾಗಿದ್ದು, ಶನಿವಾರವು ಮುಂದುವರೆದಿದೆ ಎಂದು ಇ.ಡಿ ಹೇಳಿದೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಇಡಿ, ದಾಳಿ ವೇಳೆ, ತನಿಖಾ ಸಂಸ್ಥೆಯು ಚೀನೀ ವ್ಯಕ್ತಿಗಳು ನಿಯಂತ್ರಿಸಲ್ಪಡುತ್ತಿದ್ದ ಈ ಘಟಕಗಳ ವ್ಯಾಪಾರಿ ಐಡಿಗಳು ಮತ್ತು ಬ್ಯಾಂಕ್ ಖಾತೆಗಳಲ್ಲಿ ಇರಿಸಲಾಗಿದ್ದ ₹ 17 ಕೋಟಿ ಹಣವನ್ನು ವಶಪಡಿಸಿಕೊಂಡಿದೆ ಎಂದು ಎಂದು ತಿಳಿಸಲಾಗಿದೆ.

ಈ ಘಟಕಗಳ ಕಾರ್ಯ ವಿಧಾನವೆಂದರೆ, ಅವರು ಭಾರತೀಯರ ನಕಲಿ ದಾಖಲೆಗಳನ್ನು ಬಳಸುತ್ತಾರೆ ಮತ್ತು ಅವರನ್ನು ಅಪರಾಧದ ಆದಾಯ ಗಳಿಕೆಗೆ ಡಮ್ಮಿ ನಿರ್ದೇಶಕರನ್ನಾಗಿ ಮಾಡುತ್ತಾರೆ ಎಂದು ಅದು ಆರೋಪಿಸಿದೆ.

ಪೇಮೆಂಟ್ ಗೇಟ್‌ವೇಗಳು/ಬ್ಯಾಂಕ್‌ಗಳೊಂದಿಗೆ ಹೊಂದಿರುವ ವಿವಿಧ ವ್ಯಾಪಾರಿ ಐಡಿಗಳು/ಖಾತೆಗಳ ಮೂಲಕ ಈ ಘಟಕಗಳು ತಮ್ಮ ಅಕ್ರಮ ವ್ಯವಹಾರವನ್ನು ಮಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ತನಿಖಾ ಸಂಸ್ಥೆ ಹೇಳಿದೆ.

ರೇಜರ್ ಪೇ ಪ್ರೈ ಲಿ, ಕ್ಯಾಶ್‌ಫ್ರೀ ಪೇಮೆಂಟ್ಸ್, ಪೇಟಿಎಂ ಪೇಮೆಂಟ್ ಸರ್ವಿಸಸ್ ಲಿ ಮತ್ತು ಚೀನಾದ ವ್ಯಕ್ತಿಗಳಿಂದ ನಿಯಂತ್ರಿಸಲ್ಪಡುತ್ತಿರುವ ಘಟಕಗಳು ಶೋಧ ಕಾರ್ಯಾಚರಣೆಯಲ್ಲಿ ಒಳಗೊಂಡಿವೆ. ಮೊಬೈಲ್ ಮೂಲಕ ಸಣ್ಣ ಮೊತ್ತದ ಸಾಲ ಪಡೆದ ಸಾರ್ವಜನಿಕರ ಸುಲಿಗೆ ಮತ್ತು ಕಿರುಕುಳ ನೀಡುವುದರಲ್ಲಿ ತೊಡಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಘಟಕಗಳು/ವ್ಯಕ್ತಿಗಳ ವಿರುದ್ಧ ಬೆಂಗಳೂರು ಪೊಲೀಸ್ ಸೈಬರ್ ಕ್ರೈಂ ಠಾಣೆಯಲ್ಲಿ ಕನಿಷ್ಠ 18 ಎಫ್‌ಐಆರ್‌ಗಳು ದಾಖಲಾಗಿದ್ದು, ಅವುಗಳನ್ನು ಆಧರಿಸಿ ಇ.ಡಿ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ದಾಖಲಿಸಿಕೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದಿನ ಲೇಖನನಿಮ್ಮ ಪತ್ನಿಯಲ್ಲಿ ಈ 3 ಗುಣಗಳಿದ್ದರೆ ನಿಮ್ಮಷ್ಟು ಅದೃಷ್ಟವಂತರಿಲ್ಲ
ಮುಂದಿನ ಲೇಖನಬೆಂಗಳೂರು ಪ್ರಧಾನ ಸೆಷನ್ಸ್ ನ್ಯಾಯಾಧೀಶರಾಗಿ ನ್ಯಾ.ಹುದ್ದಾರ್‌, ಕಾನೂನು ಇಲಾಖೆ ಕಾರ್ಯದರ್ಶಿಯಾಗಿ ನ್ಯಾ.ಪ್ರಭಾವತಿ ನೇಮಕ