ಮೈಸೂರು(Mysuru): ಉದ್ಯಮಿ ಕೆಜಿಎಫ್ ಬಾಬು ಮನೆ ಮೇಲೆ ದಾಳಿ ನಡೆದ ಬೆನ್ನಲ್ಲೇ ಮೈಸೂರು ಮಹಾನಗರ ಪಾಲಿಕೆ ಸದಸ್ಯೆಯೋರ್ವರ ಪತಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ಮಾಡಿದೆ.
ನಗರದ ವಾರ್ಡ್ 17ರ ಸದಸ್ಯೆ ರೇಷ್ಮಾ ಬಾನು ಅವರ ಪತಿ ರೆಹಮಾನ್ ಖಾನ್ ನಿವಾಸದ ಮೇಲೆ ಇಡಿ ದಾಳಿ ಮಾಡಿದೆ. ಇಂದು ಬೆಳಗ್ಗೆ ಇಡಿ ಅಧಿಕಾರಿಗಳು ಬನ್ನಿಮಂಟಪದಲ್ಲಿರುವ ರೆಹಮಾನ್ ಖಾನ್ ಅವರ ಮನೆಯ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.














