ಮನೆ ಕಾನೂನು ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್‌ ಗೆ ಇ.ಡಿ ಸಮನ್ಸ್

ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್‌ ಗೆ ಇ.ಡಿ ಸಮನ್ಸ್

0

ಹೈದರಾಬಾದ್: ಹೈದರಾಬಾದ್‌ ಕ್ರಿಕೆಟ್‌ ಸಂಸ್ಥೆಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್‌ ಮುಖಂಡ ಮೊಹಮ್ಮದ್‌ ಅಜರುದ್ದೀನ್‌ ಅವರಿಗೆ ಜಾರಿ ನಿರ್ದೇಶನಾಲಯ ಗುರುವಾರ (ಅ.3) ರಂದು ಸಮನ್ಸ್‌ ಜಾರಿ ಮಾಡಿದೆ.

Join Our Whatsapp Group

ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ 20 ಕೋಟಿ ಅವ್ಯವಹಾರ ನಡೆದಿದೆ ಎನ್ನಲಾಗಿದು ಈ ಕುರಿತು ತೆಲಂಗಾಣದ ಎಸಿಬಿ ಎಫ್ ಐಆರ್ ದಾಖಲು ಮಾಡಿತ್ತು ಇದರ ಆಧಾರದ ಮೇಲೆ ಇಡಿ ಪ್ರಕರಣ ದಾಖಲು ಮಾಡಿಕೊಂಡಿದೆ. ಅದರಂತೆ ಇಂದು ಅ.3 ರಂದು ಇಡಿ ಅಧಿಕಾರಿಗಳ ಮುಂದೆ ಅಜರುದ್ದೀನ್ ಹಾಜರಾಗಲಿದ್ದಾರೆ.

ಅಜರುದ್ದೀನ್ ಅವರು ಸೆಪ್ಟೆಂಬರ್ 2019 ರಲ್ಲಿ ಹೈದರಾಬಾದ್ ಕ್ರಿಕೆಟ್ ಸಂಸ್ಥೆ (HCA) ಅಧ್ಯಕ್ಷರಾಗಿ ಆಯ್ಕೆಯಾದರು. ಈ ನಡುವೆ ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣದಲ್ಲಿ ಹಣಕಾಸಿನ ಅಕ್ರಮ ಎಸಗಿದ್ದಾರೆ. ಖಾಸಗಿ ಕಂಪನಿಗಳಿಗೆ ಹೆಚ್ಚಿನ ದರದಲ್ಲಿ ಗುತ್ತಿಗೆ ನೀಡಿ ಕೋಟ್ಯಂತರ ರೂಪಾಯಿ ನಷ್ಟ ಉಂಟು ಮಾಡಿದ್ದಾರೆ ಎನ್ನಲಾಗಿದೆ ಅಲ್ಲದೆ ಇದಕ್ಕೆ ಸಂಬಂಧಿಸಿ ಮೂರೂ ಎಫ್‌ಐಆರ್‌ಗಳನ್ನು ದಾಖಲು ಮಾಡಲಾಗಿತ್ತು ಎನ್ನಲಾಗಿದೆ

ಪ್ರಕರಣಕ್ಕೆ ಸಂಬಂಧಿಸಿ ಇಡಿ ತೆಲಂಗಾಣದ 9 ಸ್ಥಳಗಳಲ್ಲಿ ದಾಳಿ ನಡೆಸಿ ಹಲವು ಮಹತ್ವದ ದಾಖಲೆಗಳು ಮತ್ತು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡಿದೆ.