ಮನೆ ರಾಷ್ಟ್ರೀಯ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಜಾರಿ

ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಜಾರಿ

0

ನವದೆಹಲಿನ್ಯಾಷನಲ್ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ.

ನ್ಯಾಷನಲ್ ಹೆರಾಲ್ಡ್‌ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 8 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

2015 ರಲ್ಲಿ ತನಿಖಾ ಸಂಸ್ಥೆಯಿಂದ ಮುಕ್ತಾಯವಾಗಿದ್ದ ನ್ಯಾಷನಲ್ ಹೆರಾಲ್ಡ್ ಪ್ರಕರಣದೊಂದಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿ ಜಾರಿ ನಿರ್ದೇಶನಾಲಯವು ಸಮನ್ಸ್ ನೀಡಿದೆ.

ಈ ಬಗ್ಗೆ ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಇದನ್ನು ಖಚಿತಪಡಿಸಿದ್ದು, ಸೋನಿಯಾ ಗಾಂಧಿ ಅವರು ಹೇಳಿದ ದಿನಾಂಕದಂದು ಅಗತ್ಯವಿದ್ದಲ್ಲಿ ಹಾಜರಾಗುತ್ತಾರೆ. ಆದರೆ ಪಕ್ಷವು ತನಿಖಾ ಸಂಸ್ಥೆಗೆ ಪತ್ರ ಬರೆದು ರಾಹುಲ್ ಗಾಂಧಿಗೆ ಕೆಲವು ವಿನಾಯಿತಿಗಳನ್ನು ಕೋರುತ್ತದೆ. ಮನಿ ಲಾಂಡರಿಂಗ್ ಅಥವಾ ಯಾವುದೇ ಹಣ ವಿನಿಮಯದ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ಸಿಂಘ್ವಿ ಹೇಳಿದ್ದಾರೆ.

ಹಿಂದಿನ ಲೇಖನ50ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಕ್ಕೆ ಐಟಿ ದಾಳಿ: ತೆರಿಗೆ ವಂಚನೆ ಆರೋಪ
ಮುಂದಿನ ಲೇಖನಬಸವಣ್ಣನವರ ಪಠ್ಯ ತಿರುಚುವಿಕೆ: ಸಿಎಂ ಗೆ ಪತ್ರ ಬರೆದ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ