ಮನೆ ರಾಷ್ಟ್ರೀಯ ಜು.25ಕ್ಕೆ 2ನೇ ಹಂತದ ವಿಚಾರಣೆಗೆ ಹಾಜರಾಗಲು ಸೋನಿಯಾ ಗಾಂಧಿಗೆ ಸಮನ್ಸ್‌

ಜು.25ಕ್ಕೆ 2ನೇ ಹಂತದ ವಿಚಾರಣೆಗೆ ಹಾಜರಾಗಲು ಸೋನಿಯಾ ಗಾಂಧಿಗೆ ಸಮನ್ಸ್‌

0

ನವದೆಹಲಿ (New Delhi): ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 25 ರಂದು ಎರಡನೇ ಸುತ್ತಿನ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಇಡಿ ಸಮನ್ಸ್‌ ನೀಡಿದೆ.

ಕೋವಿಡ್-19 ನಿಂದ ಚೇತರಿಸಿಕೊಂಡಿರುವ 73 ವರ್ಷದ ಸೋನಿಯಾ ಗಾಂಧಿ ಅವರನ್ನು ಗುರುವಾರ ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು. ಆಕೆಯ ಮನವಿ ಮೇರೆಗೆ ವಿಚಾರಣೆಯನ್ನು ಅಂತ್ಯಗೊಳಿಸಲಾಗಿತ್ತು.

ಮತ್ತೆ 26 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲು ಉದ್ದೇಶಿಸಲಾಗಿತ್ತು. ಆದರೆ, ಸೋನಿಯಾ ಗಾಂಧಿ ಅವರ ಒತ್ತಾಯದ ಮೇರೆಗೆ ಜುಲೈ 25 ರಂದು ಎರಡನೇ ಹಂತದ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಲಾಗಿದೆ ಎಂದು ಇಡಿ ಅಧಿಕಾರಿಗಳು ಹೇಳಿದ್ದಾರೆ.

ಹಿಂದಿನ ಲೇಖನಯೋಗಾಭ್ಯಾಸ ಆರಂಭಿಸುವವರಿಗಾಗಿ ಇಲ್ಲಿದೆ ಸುಲಭ ಆಸನಗಳು
ಮುಂದಿನ ಲೇಖನಇಂದಿನ ರಾಶಿ ಭವಿಷ್ಯ