ಮನೆ ಅಪರಾಧ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ: 6 ಮಂದಿ ಬಂಧನ

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ: 6 ಮಂದಿ ಬಂಧನ

0

ಕೊಡಗು(Kodagu): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕೋಳಿ ಮೊಟ್ಟೆ ಎಸೆದ ಘಟನೆಗೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಘಟನೆ ಸಂಬಂಧ ವಶಕ್ಕೆ ತೆಗೆದುಕೊಳ್ಳಲಾದ 9 ಮಂದಿಯ ವಿರುದ್ಧ ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿದ್ದಾರೆ.

ಅವರನ್ನು ಬಿಡುಗಡೆ ಮಾಡಬೇಕು ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಸೇರಿದಂತೆ ಬಿಜೆಪಿ ಮುಖಂಡರು ಪೊಲೀಸರಿಗೆ ಮನವಿ ಮಾಡಿದ್ದರು‌. ಆದರೆ ತಡರಾತ್ರಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಳೆಹಾನಿ ಪ್ರದೇಶಗಳ ವೀಕ್ಷಣೆಗೆಂದು ಗುರುವಾರ ಇಲ್ಲಿಗೆ ಬಂದಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕುಶಾಲನಗರ ತಾಲ್ಲೂಕಿನ ಗುಡ್ಡೆಹೊಸೂರಿನಲ್ಲಿ ಮೊಟ್ಟೆ ಎಸೆಯಲಾಗಿತ್ತು.