ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರಿಗೆ ರಾಜೀನಾಮೆ ಸಲ್ಲಿಸಿದರು.
ಇದರೊಂದಿಗೆ ಅವರ ಇಡೀ ಸಂಪುಟ ಕೂಡ ರಾಜೀನಾಮೆ ಸಲ್ಲಿಸಿದೆ. ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರು ಮುಂದಿನ ಸರ್ಕಾರ ರಚನೆಯಾಗುವವರೆಗೂ ತಮ್ಮ ಹುದ್ದೆಯಲ್ಲಿ ಮುಂದುವರಿಯುವಂತೆ ಸೂಚಿಸಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿಯ ಮಹಾಮೈತ್ರಿಕೂಟವು ಭಾರಿ ಬಹುಮತವನ್ನು ಸಾಧಿಸಿದೆ.
ಮಹಾರಾಷ್ಟ್ರ ಸಿಎಂ ರಾಜೀನಾಮೆಯೊಂದಿಗೆ ನೂತನ ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಚರ್ಚೆಯೂ ಅಂತ್ಯಗೊಂಡಿದೆ. ಇದೀಗ ಮಂಗಳವಾರದಂದು ಉದ್ದೇಶಿತ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಇಂದು ನೂತನ ಸಿಎಂ ಹೆಸರನ್ನು ಕೂಡ ಘೋಷಿಸಲಾಗುವುದು ಎನ್ನಲಾಗಿದೆ.