ರಾಮನಗರ: ಪಾರದರ್ಶಕ, ಮುಕ್ತ ಚುನಾವಣೆ ನಡೆಸುವಲ್ಲಿ ಚುನಾವಣಾ ಆಯೋಗ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗಿಫ್ಟ್ ಕಾರ್ಡ್ ಗಳನ್ನು ಹಂಚುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತದಾರರಿಗೆ ಗಿಫ್ಟ್ ಕಾರ್ಡುಗಳನ್ನು ಹಂಚುತ್ತಿದೆ ಈ ಮೂಲಕ ಪಾರದರ್ಶಕ, ಮುಕ್ತ ಚುನಾವಣೆ ನಡೆಸುವಲ್ಲಿ ಚುನಾವಣಾ ಆಯೋಗ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿ ಕಾರಿದ ಅವರು ಹಣ ಹಂಚಿಕೊಂಡು ಚುನಾವಣಾ ನಡೆಸಲು ಅವಕಾಶ ಮಾಡಿಕೊಟ್ಟುಬಿಡಿ ಎಂದು ಆಯೋಗದ ವಿರುದ್ಧ ಗುಡುಗಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪರವಾಗಿ ಕ್ಯೂ ಆರ್ ಕೋಡ್ ಇರುವ ಕೂಪನ್ ಗಳ ಹಂಚಿಕೆ ಮಾಡಲಾಗುತ್ತಿದೆ ಇದನ್ನು ತಡೆಯಲು ಹೋದ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ. ಕುಸುಮ ಹನುಮಂತಯ್ಯ, ಕುಣಿಗಲ್ ಶಾಸಕ ಡಾ.ರಂಗನಾಥ್, ಮಾಗಡಿ ಶಾಸಕ ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಡಿಸಿಎಂ ಡಿ.ಕೆ.ಶಿವಕುಮಾರ್ ಹೆಸರಿನಲ್ಲಿ ಕೂಪನ್ ಕಾರ್ಡುಗಳನ್ನು ಹಂಚಿಕೆ ಮಾಡಲಾಗುತ್ತಿದೆ ಎಂದು ಕೈಯಲ್ಲಿದ್ದ ಕೂಪನ್ ಕಾರ್ಡ್ ತೋರಿಸಿ ಆಕ್ರೋಶ ಹೊರ ಹಾಕಿದ್ದಾರೆ.