ಮನೆ ರಾಷ್ಟ್ರೀಯ ಗಿರ್ ಅರಣ್ಯದಲ್ಲಿರುವ ಏಕೈಕ ಮತದಾರನಿಗಾಗಿ ಮತಗಟ್ಟೆ ತೆರೆಯಲಿರುವ ಚುನಾವಣಾ ಆಯೋಗ

ಗಿರ್ ಅರಣ್ಯದಲ್ಲಿರುವ ಏಕೈಕ ಮತದಾರನಿಗಾಗಿ ಮತಗಟ್ಟೆ ತೆರೆಯಲಿರುವ ಚುನಾವಣಾ ಆಯೋಗ

0

ನವದೆಹಲಿ: ಗಿರ್‌ ಅರಣ್ಯ ಪ್ರದೇಶದಲ್ಲಿರುವ ಏಕೈಕ ಮತದಾರನಿಗೆ ಮತಗಟ್ಟೆ ತೆರೆಯಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ಗುರುವಾರ ಈ ಬಗ್ಗೆ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌, ಇದು ಚುನಾವಣಾ ಆಯೋಗದ ಸಾಮರ್ಥ್ಯ ಎಂದಿದ್ದಾರೆ.

ಗುಜರಾತ್‌ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಇಂದು ದಿನಾಂಕ ಪ್ರಕಟಿಸಿದೆ.

182 ಸದಸ್ಯ ಬಲದ ವಿಧಾನಸಭೆಗೆ ಡಿಸೆಂಬರ್ 1 ಮತ್ತು ಡಿಸೆಂಬರ್ 5ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 8ರಂದು ಮತ ಎಣಿಕೆ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ ಎಂದು ಆಯೋಗ ತಿಳಿಸಿದೆ.

ಹಿಂದಿನ ಲೇಖನನರಬಲಿ ಪ್ರಕರಣ: ಆರೋಪಿ ಲೈಲಾ ಭಗವಾಲ್ ಸಿಂಗ್’ಗೆ ಜಾಮೀನು ನಿರಾಕರಿಸಿದ ಕೇರಳ ಮ್ಯಾಜಿಸ್ಟ್ರೇಟ್ ನ್ಯಾಯಾಲಯ
ಮುಂದಿನ ಲೇಖನಕಾಂಗ್ರೆಸ್ ಪಕ್ಷದಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲ: ಆರ್.ಅಶೋಕ್ ವ್ಯಂಗ್ಯ