ಮನೆ ಸ್ಥಳೀಯ ಚುನಾವಣಾ ಹಬ್ಬ: ಏ.8 ರಂದು ಕಲಾಮಂದಿರದಲ್ಲಿ ಚಿತ್ರಕಲಾ ಸ್ಪರ್ಧೆ

ಚುನಾವಣಾ ಹಬ್ಬ: ಏ.8 ರಂದು ಕಲಾಮಂದಿರದಲ್ಲಿ ಚಿತ್ರಕಲಾ ಸ್ಪರ್ಧೆ

0

ಮೈಸೂರು: 2024 ರ ಲೋಕಸಭಾ ಚುನಾವಣೆ ಹಿನ್ನಲೆ ಸ್ವೀಪ್ ಸಮಿತಿ ವತಿಯಿಂದ ಮತದಾರರಲ್ಲಿ ಮತದಾನದ ಮಹತ್ವ, ಪ್ರತಿಯೊಂದು ಮತದಾನದ ಮೌಲ್ಯ ಹಾಗೂ ನೈತಿಕ ಮತದಾನ ಬಗ್ಗೆ, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಂಬಂಧ ಏ.08 ರಂದು ಬೆಳಿಗ್ಗೆ 10 ಗಂಟೆಗೆ ಕಲಾಮಂದಿರದಲ್ಲಿ “ಚುನಾವಣಾ ಹಬ್ಬ” ವನ್ನು ಆಯೋಜಿಸಲಾಗಿದೆ.

Join Our Whatsapp Group

ಅಂದು ಮತದಾನ ಮಹತ್ವ ಹಾಗೂ ನೈತಿಕ ಮತದಾನದ ಬಗ್ಗೆ ಬೆಳಿಗ್ಗೆ 09 ರಿಂದ 10 ಗಂಟೆವರೆಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಪರಿಕರಗಳನ್ನು ತಂದು ಮತದಾನದ ಪ್ರಾಮುಖ್ಯತೆ ಬಗ್ಗೆ ಚಿತ್ರ ಬಿಡಿಸುವುದು. ಸ್ಪರ್ಧೆಯಲ್ಲಿ ಭಾಗವಹಿಸಲು ಯಾವುದೇ ವಯೋಮಾನದ ಮಿತಿ ಇರುವುದಿಲ್ಲ. ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಸೂಕ್ತ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಗುತ್ತದೆ.

ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಕೆ.ಎಂ.ಗಾಯತ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದಿನ ಲೇಖನಜಾತ್ರೆ ವೇಳೆ ನೆಲಕ್ಕುರುಳಿದ 120 ಅಡಿ ಎತ್ತರದ ಬೃಹತ್ ತೇರು
ಮುಂದಿನ ಲೇಖನಇನ್ನಷ್ಟು ಜನ ನಮ್ಮ ಪಕ್ಷವನ್ನು ಸೇರಲಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ