ಮನೆ ಸ್ಥಳೀಯ ವಿರೋಧ ಪಕ್ಷದ ನಾಯಕರಾಗಿ ಆರ್.ಅಶೋಕ್ ಆಯ್ಕೆ ಸ್ವಾಗತಾರ್ಹ: ಎಲ್.ನಾಗೇಂದ್ರ

ವಿರೋಧ ಪಕ್ಷದ ನಾಯಕರಾಗಿ ಆರ್.ಅಶೋಕ್ ಆಯ್ಕೆ ಸ್ವಾಗತಾರ್ಹ: ಎಲ್.ನಾಗೇಂದ್ರ

0

ಮೈಸೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆರ್.ಅಶೋಕ್ ಆಯ್ಕೆ ಸ್ವಾಗತಾರ್ಹ ಎಂದು ಮಾಜಿ ಶಾಸಕ ಎಲ್.ನಾಗೇಂದ್ರ ತಿಳಿಸಿದ್ದಾರೆ.

ಆರ್. ಅಶೋಕ್ ಸಂಘಟನಾ ಚತುರರು. ಇದನ್ನು ಪರಿಗಣಿಸಿಯೇ ವೀಕ್ಷಕರು ಅವರನ್ನು ಆಯ್ಕೆ ಮಾಡಿದ್ದಾರೆ. ಇದರಿಂದ ಪಕ್ಷಕ್ಕೆ ಹೆಚ್ಚಿನ ಲಾಭವಾಗಲಿದ್ದು, ಮುಂದಿನ ದಿನಗಳಲ್ಲಿ ವರದಾನವಾಗಲಿದೆ ಎಂದು ನಾಗೇಂದ್ರ ತಿಳಿಸಿದ್ದಾರೆ.

ಅಶೋಕ್ ಅವರು ಕಳೆದ ನಲವತ್ತು ವರ್ಷಗಳಿಂದ ಬಿಜೆಪಿಯಲ್ಲಿದ್ದು ಪಕ್ಷಕ್ಕೆ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಅವರ ನಾಯಕತ್ವವನ್ನು ಎಲ್ಲರೂ ಒಪ್ಪಿಕೊಳ್ಳುವಂತದ್ದು. ಅವರು ರಾಜಕೀಯ ಪಟ್ಟುಗಳನ್ನು ಬಲವರಾಗಿದ್ದು, ಆಡಳಿತ ಪಕ್ಷದ ತಪ್ಪುಗಳನ್ನು ಸದನದಲ್ಲಿ ಎತ್ತಿ ಹಿಡಿಯುವ ಸಾಮರ್ಥ್ಯವಿದೆ. ಯಾರೊಂದಿಗೂ ಎಲ್ಲೂ ಕೂಡ ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳದೆ ಪಕ್ಷಕ್ಕೆ ನಿಷ್ಠರಾಗಿ ದುಡಿದಿದ್ದಾರೆ. ಇವೆಲ್ಲವನ್ನೂ ಪರಿಗಣಿಸಿ ಕೇಂದ್ರದ ನಾಯಕರು ಈ ಸ್ಥಾನ ನೀಡಿದ್ದಾರೆ ಎಂದು ನಾಗೇಂದ್ರ ಅಭಿಪ್ರಾಯ ಪಟ್ಟಿದ್ದಾರೆ.

ಮುಂಬರುವ ಲೋಕಸಭಾ, ಸ್ಥಳೀಯ ಸಂಸ್ಥೆಗಳ ಚುನಾವಣೆ ಮೇಲೆ ಈ ಆಯ್ಕೆ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರಲಿದೆ. ಅಲ್ಲದೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಹೊಸ ಉತ್ಸಾಹ ಬಂದಿದ್ದು, ಮೈ ಚಳಿ ಬಿಟ್ಟು ಕೆಲಸ ಮಾಡಲಿದ್ದಾರೆ. ಆ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸವಾಗಲಿದೆ ಎಂದು ಹೇಳಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಆರ್.ಅಶೋಕ್ ಜೋಡೆತ್ತಿನಂತೆ ಕೆಲಸ ಮಾಡಲಿದ್ದು, ಇವರಿಬ್ಬರ ನೇಮಕ ಕಾಂಗ್ರೆಸ್ ಪಕ್ಷಕ್ಕೆ ನಡುಕ ಉಂಟು ಮಾಡಲಿದೆ ಎಂದು ನಾಗೇಂದ್ರ ಹೇಳಿದ್ದಾರೆ.

ಹಿಂದಿನ ಲೇಖನಎಂಜಿನಿಯರ್ ಗೆ 40 ಲಕ್ಷ ರೂ. ಟೋಪಿ ಹಾಕಿದ ಅಪರಿಚಿತರು: ದೂರು ದಾಖಲು
ಮುಂದಿನ ಲೇಖನಬಿಜೆಪಿಯವರು ಯಾರನ್ನಾದರೂ ವಿಪಕ್ಷನಾಯಕನಾಗಿ ಮಾಡಲಿ ನಮಗೂ ಅದಕ್ಕೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ