ದೊಡ್ಡಬಳ್ಳಾಪುರ: ಶುಕ್ರವಾರ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರನ್ನು ಚೆಕ್ ಪೋಸ್ಟ್’ನಲ್ಲಿ ಚುನಾವಣಾ ಅಧಿಕಾರಿಗಳು ತಪಾಸಣೆ ಮಾಡಿದರು.
ದೊಡ್ಡಬಳ್ಳಾಪುರ ತಾಲ್ಲೂಕು ಗಡಿಯ ಹೊಸಹುಡ್ಯ ಸಮೀಪ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳು ಮುಖ್ಯಮಂತ್ರಿ ಕಾರು ತಡೆದು ತಪಾಸಣೆ ನಡೆಸಿದರು.
ನಂತರ ಬೊಮ್ಮಾಯಿ ಘಾಟಿ ದೇವಾಲಯಕ್ಕೆ ತೆರಳಿ ಪತ್ನಿ ಸಮೇತ ಸುಬ್ರಹ್ಮಣ್ಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಜೊತೆಗಿದ್ದರು.