ಮನೆ ಅಪರಾಧ ರಥೋತ್ಸವದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ 11 ಮಂದಿ ಸಾವು

ರಥೋತ್ಸವದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ 11 ಮಂದಿ ಸಾವು

0

ಚೆನ್ನೈ(Chennai): ರಥೋತ್ಸವದ(Chariot) ವೇಳೆ ವಿದ್ಯುತ್ ತಂತಿ(Electric wire) ಸ್ಪರ್ಶಿಸಿ(Touch) ಮೂವರು ಮಕ್ಕಳು ಸೇರಿ 11 ಮಂದಿ ಮೃತಪಟ್ಟಿದ್ದು(11 people dead), 12 ಮಂದಿ ಗಾಯಗೊಂಡಿರುವ(12 people Injured) ಘಟನೆ ತಂಜಾವೂರು ಜಿಲ್ಲೆಯಲ್ಲಿ ನಡೆದಿದೆ.

ಗಾಯಗೊಂಡಿರುವವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ದೇವರ ರಥೋತ್ಸವ ಮುಗಿಸಿ ದೇವಸ್ಥಾನಕ್ಕೆ ಹಿಂತಿರುಗುತ್ತಿದ್ದ ವೇಳೆ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರಥಕ್ಕೆ ಹೈ-ವೋಲ್ಟೇಜ್ ವಿದ್ಯುತ್ ತಂತಿ ತಗುಲಿದ ಪರಿಣಾಮ ಬಂಡಿ ಹೊತ್ತಿ ಉರಿದಿದೆ. ರಥದ ಸಮೀಪ ನಿಂತಿದ್ದ 11 ಮಂದಿ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಹಿಂದಿನ ಲೇಖನಬುದ್ದಿಮಾಂದ್ಯ ಮಕ್ಕಳಿಗೆ ಜನ್ಮನೀಡಿದ್ದ ಮಹಿಳೆಗೆ ಕಿರುಕುಳ: ಪತಿ, ಅತ್ತೆ, ಸಹೋದರಿಗೆ ಶಿಕ್ಷೆ
ಮುಂದಿನ ಲೇಖನರಾಜ್ಯದಲ್ಲಿ ಹಾಲಿನ ದರ ಕನಿಷ್ಠ 3 ರೂ. ಹೆಚ್ಚಳಕ್ಕೆ ಮನವಿ