ಬೆಳಗಾವಿ: ವಿದ್ಯುತ್ ದರ ಹೆಚ್ಚಳ ತಾತ್ಕಾಲಿಕ, ಅದಕ್ಕಾಗಿ ಕೈಗಾರಿಕೋದ್ಯಮಿಗಳು ಮಹಾರಾಷ್ಟ್ರಕ್ಕೆ ವಲಸೆ ಹೋಗುವ ಅಗತ್ಯ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ವಿದ್ಯುತ್ ದರ ತಗ್ಗಿಸದಿದ್ದರೆ ಮಹಾರಾಷ್ಟ್ರಕ್ಕೆ ವಲಸೆ ಹೋಗಲು ಬೆಳಗಾವಿ ಕೈಗಾರಿಕೋದ್ಯಮಿಗಳ ಚಿಂತನೆ ವಿಚಾರವಾಗಿ ಮಾತನಾಡಿದ ಸತೀಶ್ ಒಂದು ದಿವಸದಲ್ಲಿ ಕೈಗಾರಿಕೆಗಳು ಮಹಾರಾಷ್ಟ್ರಕ್ಕೆ ಹೋಗಲು ಆಗಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಒಂದು ಕೈಗಾರಿಕೆ ಸ್ಥಾಪಿಸಲು ಹತ್ತು ವರ್ಷ ಬೇಕು ಅದಕ್ಕೆ ಎಷ್ಟು ಶ್ರಮ, ದುಡ್ಡು ಖರ್ಚು ಆಗುತ್ತೆ. ಒಂದು ದಿವಸದಲ್ಲಿ ಕೈಗಾರಿಕೆಗಳು ಮಹಾರಾಷ್ಟ್ರಕ್ಕೆ ಹೋಗಲು ಆಗಲ್ಲ ತಕ್ಷಣ ಹೋಗೋಕೇ ಅದೇನು ಡಬ್ಬಾ ಅಂಗಡಿಯಾ ಚಹಾ ಅಂಗಡಿಯಾ ಎಂದು ಪ್ರಶ್ನಿಸಿದ್ಧಾರೆ.
ದರ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರ ನೇರವಾಗಿ ಭಾಗಿಯಾಗುವುದಿಲ್ಲ. ಕೆಇಆರ್ ಸಿ ಅದನ್ನು ಮಾಡುತ್ತದೆ. ಮೂರು ಪಟ್ಟು ಹೆಚ್ಚಳ ಆಗಲು ಸಾಧ್ಯವಿಲ್ಲ. ಈ ಕುರಿತು ಸಭೆ ನಡೆಸಿ ಗೊಂದಲಕ್ಕೆ ತೆರೆ ಎಳೆಯುತ್ತೇನೆ ಎಂದು ತಿಳಿಸಿದ್ದಾರೆ.
ದರ ಪರಿಷ್ಕರಣೆ ರಾಜ್ಯದಲ್ಲಿ ಮಾತ್ರವಲ್ಲ ದೇಶದ ಇತರೆ ಕಡೆಗಳಲ್ಲೂ ಕೂಡ ಏರಿಕೆಯಾಗಿದೆ. ಬಿಲ್ ದರ ಮೂರು ಪಟ್ಟು ಹೆಚ್ಚಳವಾಗಿ ಬಂದಿದೆ ಎಂದು ಹೇಳುತ್ತಿದ್ದಾರೆ. ನಾನು ಕನ್ಫ್ಯೂಷನ್ ನಲ್ಲಿ ಇದ್ದೇನೆ ಮಾಹಿತಿ ಪಡೆದು ಆ ನಂತರ ತಿಳಿಸುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.