Saval TV on YouTube
ಬೆಂಗಳೂರು(Bengaluru): ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಸರ್ಕಾರ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗದುಕೊಂಡಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ ಎಂದು ತಿಳಿಸಿದ್ದಾರೆ.