ಕೊಲಂಬೊ(colombo): ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಜನರ ಆಕ್ರೋಶ ಭುಗಿಲೆದ್ದಿದ್ದು, ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
ಈ ಕುರಿತು ಪ್ರಧಾನಿ ಕಚೇರಿ ಮಾಹಿತಿ ನೀಡಿದ್ದು, ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ ಪಲಾಯನ ಮಾಡಿದ ಬಳಿಕ ದೇಶದಲ್ಲಿ ಪರಿಸ್ಥಿತಿ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದೆ.
ಶ್ರೀಲಂಕಾದಲ್ಲಿ ಜನರ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕೊಲಂಬೊ ನಗರದಾದ್ಯಂತ ಬುಧವಾರ ಪ್ರತಿಭಟನೆಗಳು ಮತ್ತೆ ಭುಗಿಲೆದ್ದಿವೆ. ಈ ಎಲ್ಲ ಬೆಳವಣಿಗೆಗಳ ನಡುವೆ ಜನರ ಆಕ್ರೋಶಕ್ಕೆ ಮಣಿದಿರುವ ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ, ಬುಧವಾರ ಮುಂಜಾನೆ ದೇಶ ಬಿಟ್ಟು ಮಾಲ್ಡೀವ್ಸ್‌ಗೆ ಪರಾರಿಯಾಗಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.