ಮನೆ ಸುದ್ದಿ ಜಾಲ ವರುಣಾ ಕ್ಷೇತ್ರದಲ್ಲಿ ಶೈಕ್ಷಣಿಕ ಪ್ರಗತಿಗೆ ಒತ್ತು: ಡಾ.ಯತೀಂದ್ರ ಸಿದ್ದರಾಮಯ್ಯ

ವರುಣಾ ಕ್ಷೇತ್ರದಲ್ಲಿ ಶೈಕ್ಷಣಿಕ ಪ್ರಗತಿಗೆ ಒತ್ತು: ಡಾ.ಯತೀಂದ್ರ ಸಿದ್ದರಾಮಯ್ಯ

0

ಮೈಸೂರು(Mysuru): ವರುಣಾ ಕ್ಷೇತ್ರದಲ್ಲಿ ಶಿಥಿಲಗೊಂಡಿರುವ ಶಾಲಾ ಕೊಠಡಿಗಳನ್ನು ಕೆಡವಿ ಹೊಸ ಶಾಲೆ ಕಟ್ಟಡಗಳನ್ನು ನಿರ್ಮಾಣ ಮಾಡಿ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಶಾಲಾ ಕಟ್ಟಡಗಳನ್ನು ನಿರ್ಮಾಣ ಮಾಡುವ ಮೂಲಕ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಶಾಸಕ ಡಾ.ಯತೀಂದ್ರ ಸಿದ್ರಾಮಯ್ಯ ತಿಳಿಸಿದರು.

ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ವರುಣಾ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಸರ್ಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲಾ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶಾಲಾ ಕಟ್ಟಡ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಲು ಗ್ರಾಮ ಪಂಚಾಯತಿಯವರ ಜೊತೆ ಕೈಜೋಡಿಸಿ ಶ್ರಮಿಸುದಾಗಿ ತಿಳಿಸಿದರು.

ಶಾಲೆಯ ಸುತ್ತಲೂ ಆಟದ ಮೈದಾನ ಕಾಂಪೌಂಡ್ ನಿರ್ಮಾಣ ಸೇರಿದಂತೆ ಶಾಲೆಯ ಅಭಿವೃದ್ಧಿಗೆ ಶಾಸಕರ ಅನುದಾನದಲ್ಲಿ ಸಹ ಅಭಿವೃದ್ಧಿಗೆ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಹಾಗೂ ವೀರಶೈವ ಮುಖಂಡ ವರುಣ ಮಹೇಶ್,  ಮುಖಂಡ ಚಿಕ್ಕದೇವಯ್ಯ, ಎಪಿಎಂಸಿ ಸದಸ್ಯ ಬಸವರಾಜು, ಸಿದ್ದರಾಮಯ್ಯನ ಹುಂಡಿ ಸಿದ್ದರಾಮ, ವರುಣ ಬ್ಲಾಕ್ ಉಪಾಧ್ಯಕ್ಷ ರವಿ ಬುಗುತಗಳ್ಳಿ, ಮಣಿ, ಮಿಲ್ಟ್ರಿ ಮಹಾದೇವ ಕುಪ್ಯಾ ಪುಟ್ಟರಾಮು, ಹುಚ್ಚಪ್ಪ, ಶಾಲೆಯ ಮುಖ್ಯ ಶಿಕ್ಷಕರು, ಸಹಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.

ಹಿಂದಿನ ಲೇಖನನಟಿ ರಚಿತಾ ರಾಮ್ ವಿರುದ್ಧ ಪ್ರಕರಣ ದಾಖಲು
ಮುಂದಿನ ಲೇಖನನ್ಯೂಜಿಲೆಂಡ್ ಎದುರು ಒಡಿಐ ಸರಣಿ ಗೆದ್ದ ಭಾರತ