ಬುದ್ಗಾಮ್ (Budgam): ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ಉಗ್ರರನ್ನು ಹೊಡೆದುರುಳಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ನ ಖಾನ್‌ಸಾಹಿಬ್ ಪ್ರದೇಶದ ವಾಟರ್‌ಹೇಲ್‌ನಲ್ಲಿ ಉಗ್ರರು ಅಡಗಿ ಕುಳಿತಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ಉಗ್ರರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿದ್ದಾರೆ. ಈ ವೇಳೆ ಕಾರ್ಯಾಚರಣೆಯನ್ನು ಎನ್ ಕೌಂಟರ್ ಗೆ ಪರಿವರ್ತಿಸಿ ಮೂವರು ಉಗ್ರರನ್ನು ಹತ್ಯೆಗೈಯಲಾಗಿದೆ.
ಎನ್‌ಕೌಂಟರ್ ವೇಳೆ ಮೇ ತಿಂಗಳಲ್ಲಿ ಕಾಶ್ಮೀರಿ ಪಂಡಿತ್ ಸರ್ಕಾರಿ ನೌಕರ ರಾಹುಲ್ ಭಟ್ ಹತ್ಯೆಯಲ್ಲಿ ಭಾಗಿಯಾಗಿದ್ದ ಮೋಸ್ಟ್ ವಾಂಟೆಡ್ ಲತೀಫ್ ರಾಥರ್ ಸೇರಿದಂತೆ ಮೂವರು ಲಷ್ಕರ್ ವ್ಯಕ್ತಿಗಳು ಸಿಕ್ಕಿಬಿದ್ದಿದ್ದರು ಎಂದು ಕಾಶ್ಮೀರ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ವಿಜಯ್ ಕುಮಾರ್ ಹೇಳಿದ್ದಾರೆ.